Advertisement

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

04:59 AM Dec 27, 2024 | Team Udayavani |

ಬೆಂಗಳೂರು: ರಾಜ್ಯದಲ್ಲಿ ಪ್ರತೀ ಲೀಟರ್‌ ಹಾಲಿಗೆ 5 ರೂ. ಹೆಚ್ಚಳ ಮಾಡುವಂತೆ ರೈತರು ಹಾಗೂ ರಾಜ್ಯದ ವಿವಿಧ ಹಾಲು ಒಕ್ಕೂಟಗಳಿಂದ ಬೇಡಿಕೆ ಇದ್ದು, ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆಗೆ ಸರಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ ಸ್ಪಷ್ಟಪಡಿಸಿದ್ದಾರೆ.

Advertisement

ಹಾಲಿನ ದರ ಏರಿಕೆ ಕುರಿತು ಮಾಧ್ಯಮಗಳ ವರದಿಯನ್ನು ಅಲ್ಲಗಳೆದ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ ಅವರು ಈ ಕುರಿತು “ಉದಯವಾಣಿ’ಗೆ ಸ್ಪಷ್ಟನೆ ನೀಡಿದರು. ಹಾಲಿನ ದರ ಹೆಚ್ಚಳ ಪ್ರಸ್ತಾವನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಆದರೆ ಇನ್ನೂ ದರ ಪರಿಷ್ಕರಣೆ ಬಗ್ಗೆ ನಿರ್ಧಾರವಾಗಿಲ್ಲ.

ಸಂಕ್ರಾಂತಿ ಹಬ್ಬದ ಅನಂತರ ಸಹಕಾರ ಸಚಿವ ಕೆ.ಎನ್‌. ರಾಜಣ್ಣ, ಸಚಿವ ವೆಂಕಟೇಶ್‌ ಹಾಗೂ ರಾಜ್ಯ ಹಾಲು ಒಕ್ಕೂಟದ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು, ಕೆಎಂಎಫ್ ನಿರ್ದೇಶಕರನ್ನು ಒಳಗೊಂಡಂತೆ ಪ್ರಮುಖರೊಂದಿಗೆ ಮತ್ತೊಮ್ಮೆ ಸಭೆ ನಡೆಸಿ ಹಾಲಿನ ದರ ಪರಿಷ್ಕರಣೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಅಂತಿಮ ತೀರ್ಮಾನ ಆಗಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next