Advertisement

KMF: ರಾಜ್ಯದಲ್ಲಿ ಹಾಲಿನ ದರ ಲೀಟರ್‌ಗೆ ಎರಡು ರೂಪಾಯಿ ಹೆಚ್ಚಳ…

12:25 PM Jun 25, 2024 | Team Udayavani |

ಬೆಂಗಳೂರು: ಇತ್ತೀಚೆಗಷ್ಟೇ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಸಿ ರಾಜ್ಯದ ಜನರ ಮೇಲೆ ಬರೆ ಹಾಕಿದ್ದ ರಾಜ್ಯ ಸರ್ಕಾರ ಈಗ ಹಾಲಿನ ದರ ಹೆಚ್ಚಳಗೊಳಿಸಿ ಜನರ ಜೇಬಿಗೆ ಕತ್ತರಿ ಹಾಕಿದೆ. ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್‌)ದ ಉತ್ಪನ್ನವಾದ ನಂದಿನಿ  ಹಾಲಿನ ದರ ಲೀಟರ್‌ಗೆ 2 ರೂಪಾಯಿ ಹೆಚ್ಚಿಸಿ ಮಹತ್ವದ ನಿರ್ಧಾರ ಪ್ರಕಟಿಸಿದೆ.

Advertisement

ಕೆಎಂಎಫ್ ಮುಖ್ಯ ಕಚೇರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುದ್ದಿಗೋಷ್ಠಿ ನಡೆಸಿ, ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿ  ಒಂದು ಲೀಟರ್ ನಂದಿನಿ ಹಾಲಿನ  ಪ್ಯಾಕೆಟ್​​ಗೆ 50 ಎಂಎಲ್​​ ಹಾಲು ಹೆಚ್ಚುವರಿಯಾಗಿ ಸೇರಿಸಲಾಗುವುದು. ಸದ್ಯ ಲೀಟರ್ ಹಾಲಿಗೆ ಇರುವ 42 ರೂಪಾಯಿ ಇದ್ದು ದರವನ್ನು 2 ರೂಪಾಯಿ ಹೆಚ್ಚಳ ಮಾಡಲಾಗುವುದು. ಅರ್ಧ ಲೀಟರ್‌ ಹಾಲಿನ ದರದಲ್ಲೂ 2 ರೂ. ಹೆಚ್ಚಳವಾಗಲಿದೆ. ಸದ್ಯ  ಅರ್ಧ ಲೀಟರ್‌ ಹಾಲಿನ ಪ್ಯಾಕೇಟ್‌ಗೆ 22 ರೂ. ಇದೆ.  ಅರ್ಧ ಲೀಟರ್‌ ಹಾಲಿನಲ್ಲೂ  ಹೆಚ್ಚುವರಿಯಾಗಿ 50 ಎಂಎಲ್‌ ಸೇರಿಸಲಾಗುವುದು ಈ ಪರಿಷ್ಕೃತ ದರವೂ ನಾಳೆಯಿಂದಲೇ  ಅನ್ವಯವಾಗಲಿದೆ ಎಂದು ಭೀಮಾನಾಯ್ಕ್ ತಿಳಿಸಿದರು.

ಇತರೆ ರಾಜ್ಯಗಳಿಗೆ ಹೋಲಿಸಿದಲ್ಲಿ ರಾಜ್ಯದಲ್ಲಿ ದರ ಕಡಿಮೆ ಇದೆ ಎಂದು ಕೆಎಂಎಫ್‌ ಅಧ್ಯಕ್ಷ ಭೀಮಾನಾಯ್ಕ್‌ ಬೆಲೆ ಏರಿಕೆ ಸಮರ್ಥಿಸಿಕೊಂಡಿದ್ದಾರೆ.

ಮೊಸರು, ಇತರೆ ಉತ್ಪನ್ನದ ಬೆಲೆ ಏರಿಕೆ ಇಲ್ಲ:  ಈ ಪರಿಷ್ಕೃತ ದರಗಳು ಹಾಲಿಗೆ ಮಾತ್ರ ಅನ್ವಯವಾಗಲಿದೆ. ನಂದಿನಿಯ ಇತರೆ  ಉತ್ಪನ್ನಗಳಾದ ಮೊಸರು, ಲಸ್ಸಿ, ಇತರೆ ಉತ್ಪನ್ನಗಳಲ್ಲಿ ಏರಿಕೆ ಇಲ್ಲವೆಂದು ಕೆಎಂಎಫ್‌ ಅಧ್ಯಕ್ಷ ಹೇಳಿದ್ದಾರೆ.   ಕೆಎಂಎಫ್​ ಎಂಡಿ ಎಂಕೆ ಜಗದೀಶ್, ಆಡಳಿತ ಮಂಡಳಿ ಸದಸ್ಯರು ಸಹ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next