Advertisement

KMF: ನಂದಿನಿ ಹಾಲಿನ ಪ್ರಮಾಣದಲ್ಲಿ ಹೆಚ್ಚಳ, ದರ ಏರಿಸಿಲ್ಲ

06:56 PM Jun 25, 2024 | Team Udayavani |

ಬೆಂಗಳೂರು: ನಂದಿನಿ ಹಾಲಿನ ಪ್ಯಾಕೇಟ್‌ಗಳಲ್ಲಿ ಹಾಲಿನ ಪ್ರಮಾಣವನ್ನು 50 ಎಂ.ಎಲ್‌ ಹೆಚ್ಚಳ ಮಾಡಿ, ಹೆಚ್ಚುವರಿ ಹಾಲಿಗೆ 2 ರೂಪಾಯಿ ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಾ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

Advertisement

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿ ಅರ್ಧಲೀಟರ್‌ ಹಾಲಿನ ಪ್ಯಾಕೇಟ್‌ ನಲ್ಲಿ ಇನ್ನು ಮುಂದೆ 550 ಎಂಎಲ್‌ ಹಾಲು ಹಾಗೂ ಲೀಟರ್‌ ಪ್ಯಾಕೇಟ್‌ ನಲ್ಲಿ 1,050 ಎಂಎಲ್‌ ಹಾಲು ಸಿಗಲಿದೆ. ಈ ವರೆಗೆ 1,000 ಮಿ.ಲೀ ಹಾಲಿಗೆ ರೂ.42 ಹಾಗೂ 500 ಮಿ.ಲೀ ಹಾಲಿಗೆ ರೂ.22 ದರ ನಿಗದಿಪಡಿಸಲಾಗಿತ್ತು, ಇನ್ನು ಮುಂದೆ 1,050 ಮಿ.ಲೀ ಹಾಗೂ 550 ಮಿ.ಲೀ ಹಾಲಿನ ಪ್ಯಾಕೇಟ್‌ ಗಳನ್ನು ಮಾರಾಟ ಮಾಡಲಾಗುತ್ತಿದ್ದು, ಅದಕ್ಕೆ ಕ್ರಮವಾಗಿ ರೂ.44 ಹಾಗೂ ರೂ.24 ದರ ನಿಗದಿಪಡಿಸಲಾಗುತ್ತದೆ.  ಹಾಲು ಸಂಗ್ರಹಣಾ ಕೇಂದ್ರಗಳಲ್ಲಿ ಯಾವುದೇ ಕಾರಣಕ್ಕೂ ರೈತರು ಹೆಚ್ಚುವರಿಯಾಗಿ ತರುತ್ತಿರುವ ಹಾಲು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಕೆಎಂಎಫ್‌ ಸಂಸ್ಥೆ ಪ್ಯಾಕೇಟ್‌ ಗಳಲ್ಲಿ ಹಾಲಿನ ಪ್ರಮಾಣವನ್ನು ಹೆಚ್ಚಳ ಮಾಡುವ ತೀರ್ಮಾನ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: KMF: ರಾಜ್ಯದಲ್ಲಿ ಹಾಲಿನ ದರ ಲೀಟರ್‌ಗೆ ಎರಡು ರೂಪಾಯಿ ಹೆಚ್ಚಳ…

ರಾಜ್ಯದಲ್ಲಿ ಹಾಲಿನ ಉತ್ಪಾದನೆ ಹೆಚ್ಚಳ: 
ಕಳೆದ ವರ್ಷಕ್ಕೆ ಹೋಲಿಸಿದರೆ ರಾಜ್ಯದಲ್ಲಿ ಈ ಬಾರಿ ಹಾಲಿನ ಉತ್ಪಾದನೆ ಶೇ.15 ಹೆಚ್ಚಳವಾಗಿದೆ.  ಹಿಂದಿನ ವರ್ಷಗಳಲ್ಲಿ ಈ ವೇಳೆಗೆ ನಿತ್ಯ ಸರಾಸರಿ 90 ಲಕ್ಷ ಲೀಟರ್‌ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣ ಈ ಬಾರಿ ಸರಾಸರಿ 99 ಲಕ್ಷ ಲೀಟರ್‌ ಗೆ ಏರಿಕೆಯಾಗಿದೆ. ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುವ ಹಾಲನ್ನು ರೈತರಿಂದ ಖರೀದಿಸಬೇಕು, ಯಾವುದೇ ಕಾರಣಕ್ಕೂ ಅವರಿಂದ ಹಾಲು ಪಡೆಯಲು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಒಂದು ಲೀಟರ್‌ ಹಾಲಿನ ಪ್ಯಾಕೇಟಿಗೆ ಹೆಚ್ಚುವರಿಯಾಗಿ 50 ಮಿ.ಲೀ ಹಾಲು ಸೇರಿಸಿ, ಈ ಹೆಚ್ಚುವರಿ ಹಾಲಿನ ಬೆಲೆ 2 ರೂಪಾಯಿ ಮಾತ್ರ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆ.


ರೈತರ ಹಿತದೃಷ್ಟಿಗೆ ಕೆಎಂಎಫ್ ನಿರ್ಧಾರ
ಇದು ನಾಡಿನ ಲಕ್ಷಾಂತರ ಹೈನುಗಾರರ ಹಿತದೃಷ್ಟಿಯಿಂದ ಕೆಎಂಎಫ್‌ ಸಂಸ್ಥೆಯು ತೆಗೆದುಕೊಂಡ ನಿರ್ಣಯವಾಗಿದ್ದು, ಹೆಚ್ಚುವರಿಯಾಗಿ ಉತ್ಪಾದನೆಯಾಗುವ ಹಾಲನ್ನು ಗ್ರಾಹಕರಿಗೆ ನೇರವಾಗಿ ತಲುಪಿಸುವ ಸದುದ್ದೇಶ ಹೊಂದಲಾಗಿದೆ. ಈಗಾಗಲೇ ಗರಿಷ್ಠ  ಪ್ರಮಾಣದ ಹಾಲನ್ನು ಹಾಲಿನ ಪೌಡರ್‌ ತಯಾರಿಸುವ ಉದ್ದೇಶಕ್ಕೆ ಬಳಕೆ ಮಾಡಲಾಗುತ್ತಿದೆ. ನಿತ್ಯ ಸುಮಾರು 30 ಲಕ್ಷ ಲೀಟರ್‌ ಹಾಲು ಪೌಡರ್‌ ತಯಾರಿಕೆಗಾಗಿ ಬಳಸಲ್ಪಡುತ್ತಿದ್ದು, 250 ಮೆಟ್ರಿಕ್‌ ಟನ್‌ ಹಾಲಿನ ಪೌಡರ್‌ ತಯಾರಿಸಲಾಗುತ್ತಿದೆ. ಇದು ಹಾಲಿನ ಪೌಡರ್‌ ಗೆ ಇರುವ ಬೇಡಿಕೆಗೆ ಅನುಗುಣವಾಗಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next