Advertisement
ಈ ಬಗ್ಗೆ ಮಂಗಳವಾರ ಸಂಜೆ ಸುದ್ಧಿ ಮಾಧ್ಯಮಗಳಿಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ಪ್ರತಿ ಲೀಟರ್ ಹಾಲಿಗೆ ಕನಿಷ್ಠ 3 ರೂ.ಗಳನ್ನು ಹೆಚ್ಚಿಗೆ ಮಾಡುವಂತೆ ಮುಖ್ಯಮಂತ್ರಿಗಳನ್ನು ಅವರು ಕೋರಿದ್ದಾರೆ.
Related Articles
Advertisement
ಪಶು ಸಂಗೋಪನೆ ಕಾರ್ಯಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವುದಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಲಾಗಿದೆ. 2019-20 ರಲ್ಲಿ ವಾರ್ಷಿಕವಾಗಿ ಕೆಎಂಎಫ್ 40-50 ಕೋಟಿ ರೂಪಾಯಿ ಈ ಯೋಜನೆಗಳಿಗೆ ನೀಡಲಾಗುತ್ತಿದ್ದು, ಮುಂದಿನ ಆಯವ್ಯಯದಲ್ಲಿ 50 ಕೋಟಿ ರೂ. ನೀಡುತ್ತಿರುವುದನ್ನು 80 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ. ಮುಂದಿನ 5 ವರ್ಷಗಳಲ್ಲಿ ಸಮಗ್ರ ಮಾರುಕಟ್ಟೆ ಅಭಿವೃದ್ಧಿ ಯೋಜನೆ ರೂಪಿಸಿದ್ದು, 2026-27ನೇ ಸಾಲಿಗೆ 133.84 ಲಕ್ಷ ಲೀಟರ್ ಹಾಲು ಶೇಖರಿಸುವ ಗುರಿಯನ್ನು ಹೊಂದಲಾಗಿದೆ. ಅದರಲ್ಲಿ 110 ಲಕ್ಷ ಲೀಟರ್ ಹಾಲು ಮತ್ತು ಹಾಲಿನ ಉತ್ಪನ್ನಗಳ ರೂಪದಲ್ಲಿ ಮತ್ತು ಉಳಿದ ಹಾಲನ್ನು ಹಾಲಿನ ಪುಡಿ ಪರಿವರ್ತನೆಗಾಗಿ ಮಾರಾಟ ಮಾಡುವ ಯೋಜನೆ ರೂಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಮೈ ಸವರಲು ಹೋದ ವೇಳೆ ಎತ್ತು ಮುನಿಸು, ಅಪಾಯದಿಂದ ಮುಖ್ಯಮಂತ್ರಿ ಪಾರು
ನೆರೆಯ ರಾಜ್ಯಗಳ ನಗರ ಪ್ರದೇಶಗಳಾದ ಚೆನ್ನೈ, ಮುಂಬಯಿ, ಗೋವಾ, ಹೈದ್ರಾಬಾದ್, ಪುಣೆಗಳಲ್ಲಿ ಪ್ರತಿನಿತ್ಯ ನಂದಿನಿ 10 ಲಕ್ಷ ಲೀಟರ್ ಹಾಲನ್ನು ಮಾರಾಟ ಮಾಡಲಾಗುತ್ತಿದೆ. ಮಾರಾಟದ ಜಾಲವನ್ನು ಇನ್ನಷ್ಟು ವಿಸ್ತರಿಸುವ ಉದ್ಧೇಶದಿಂದ ಮಹಾರಾಷ್ಟ್ರದ ವಿದರ್ಭ ಪ್ರಾಂತದಲ್ಲಿ ಹಾಲಿನ ಮಾರಾಟ ಪ್ರಾರಂಭಿಸಲಾಗಿದೆ. ಕೆಫೆ ಕಾಫೀ ಡೇ ಮಾದರಿಯಲ್ಲಿ ನಂದಿನಿ ಮಾದರಿಯಲ್ಲಿ ವಿನೂತನ ನಂದಿನಿ ಕೆಫೆ ಮೂ ಅನ್ನು ಈಗಾಗಲೇ ರಾಜ್ಯಾದ್ಯಂತ ಸ್ಥಾಪಿಸಲಾಗಿದೆ. ಮುಂದಿನ ವರ್ಷದಿಂದ ಬೇರೆ ಬೇರೆ ನಗರಗಳಲ್ಲಿ 100ಕ್ಕೂ ಅಧಿಕ ವಿನೂತನ ನಂದಿನಿ ಕೆಫೆ ಮ್ಹೂ ಸ್ಥಾಪಿಸುವ ಗುರಿ ಹೊಂದಲಾಗಿದೆ. ಅಮೇರಿಕಾ, ಆಸ್ಟ್ರೇಲಿಯಾ, ಅಪಘಾನಿಸ್ಥಾನ, ಭೂತಾನ್, ಸಿಂಗಾಪೂರ, ಬಹರೆನ್ ಮುಂತಾದ ವಿವಿಧ ದೇಶಗಳಿಗೆ 20 ಕೋಟಿ ಅಧಿಕ ಮೌಲ್ಯದ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡಲಾಗಿದೆ. 2022-23 ರಲ್ಲಿ ಒಟ್ಟು 300 ಕೋಟಿ ರೂ. ಮೌಲ್ಯದ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ರಫ್ತು ಮಾಡುವ ಗುರಿ ಹೊಂದಲಾಗಿದೆ ಎಂದು ಅವರು ಹೇಳಿದ್ದಾರೆ.
ಕೆಎಂಎಫ್ ನಿಂದ ಪೂರೈಸಲಾಗಿರುವ ಪಶು ಆಹಾರ ದರದಲ್ಲಿ ಪ್ರತಿ ಟನ್‌ಗೆ ರೂ. 500 ರಿಂದ 2000 ರೂ.ಗಳವರೆಗೆ ವಿವಿಧ ಸಂದರ್ಭಗಳಲ್ಲಿ ರಿಯಾಯಿತಿ ನೀಡಲಾಗಿದೆ. ಕಳೆದ ಎರಡುವರೆ ವರ್ಷಗಳಲ್ಲಿ ಒಟ್ಟು 160 ಕೋಟಿ ರೂ.ಗಳಿಗಿಂತ ಹೆಚ್ಚಿನ ರಿಯಾಯಿತಿ ನೀಡಲಾಗಿದೆ. ಧಾರವಾಡ ಮತ್ತು ಗುಬ್ಬಿ ಪಶು ಆಹಾರ ಘಟಕಗಳಲ್ಲಿ ಆಹಾರ ಉತ್ಪಾದನಾ ಸಾಮರ್ಥ್ಯವನ್ನು ತಲಾ 300 ಟನ್‌ನಂತೆ ಒಟ್ಟು 600 ಟನ್ ಪ್ರತಿದಿನಕ್ಕೆ ಹೆಚ್ಚಿಸಲಾಗಿದೆ. ಇದರೊಂದಿಗೆ ಕೆ.ಆರ್ ಪೇಟೆ, ಮಂಡ್ಯ, ಅರಕಲಗೂಡು, ಹಾಸನ ಜಿಲ್ಲೆಗಳಲ್ಲಿ ಹೊಸ ಘಟಕಗಳನ್ನು ಸ್ಥಾಪಿಸಿ ಈಗಾಗಲೇ ಪ್ರತಿ ತಿಂಗಳಲ್ಲಿ 45 ಸಾವಿರ ಟನ್ ಪೂರೈಕೆಯಾಗುತ್ತಿದ್ದ ಪಶು ಆಹಾರ ಪ್ರಮಾಣವನ್ನು 65 ಸಾವಿರ ಟನ್‌ಗೆ ಹೆಚ್ಚಿಸಲಾಗಿದೆ. ಈ ಗುರಿಯನ್ನು ಮುಂದಿನ ಸಾಲಿಗೆ 75 ಸಾವಿರ ಟನ್ ಗುಣಮಟ್ಟದ ಪಶು ಆಹಾರ ಪೂರೈಕೆಗೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.