Advertisement
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿವಿದ ಇಲಾಖೆ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬೇಸಿಗೆ ಮುಗಿಯವ ಹಂತ ಮಳೆಗಾಲ ಆರಂಭದಲ್ಲಿ 5 ವರ್ಷದೊಳಗಿನ ಮಕ್ಕಳಲ್ಲಿ ಕಂಡು ಬರುವ ಅತಿಸಾರ ಭೇದಿಯಿಂದ ದೇಶದಲ್ಲಿ ಲಕ್ಷಾಂತರ ಮಕ್ಕಳು ಸಾವಿಗಿಡಾಗುತ್ತಿದ್ದು ಇದನ್ನುತಪ್ಪಿಸಲು ಜನರಲ್ಲಿ ಈ ಕಾಯಿಲೆ ಬಗ್ಗೆ ಅರಿವು ಮೂಡಿಸುವುದು ಬಹು ಮುಖ್ಯ ಎಂದರು.
Related Articles
Advertisement
ಶುದ್ಧ ನೀರು ಪೂರೈಸಿ: ಗ್ರಾಮೀಣ ಪ್ರದೇಶ ಮತ್ತು ನಗರ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಗೆ ಸಿಸ್ಟನ್‌ಗಳನ್ನು ಅಳವಡಿಸಿದ್ದು ಸ್ಥಳೀಯ ಸಂಸ್ಥೆಗಳು ನಿರ್ಮಿಸಿರುವ ಸಿಸ್ಟ್‌ನ್‌ಗಳನನು ಸ್ವಚ್ಛತೆ ಮಾಡಲು ಮುಂದಾಗಿ ಶುದ್ಧ ಕುಡಿಯುವ ನೀರಿನ ಪೂರೈಕೆಗೆ ಮುಂದಾಗಬೇಕು ಎಂದು ತಿಳಿಸಿದರು.
ಅಪೌಷ್ಟಿಕತೆ ನಿವಾರಣೆ: ತಾಲೂಕು ಆರೋಗ್ಯಧಿಕಾರಿ ಡಾ.ವಿಜಯ್ ಮಾತನಾಡಿ, ಮಕ್ಕಳಲ್ಲಿ ಕಂಡು ಬರುವ ಅಪೌಷ್ಟಿಕತೆಯನ್ನು ಹೋಗಲಾಡಿಸಲು ಆರೋಗ್ಯ ಇಲಾಖೆ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಹಿಂದೆ ಅಪೌಷ್ಟಿಕತೆ ಕಂಡು ಬಂದ ಮಕ್ಕಳನ್ನು ಜಿಲ್ಲಾ ಆಸ್ಪತ್ರೆಗೆ ಮಕ್ಕಳನ್ನು ದಾಖಲಿಸಬೇಕಿತ್ತು ಅದರೆ ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಅಪೌಷ್ಟಿಕತೆ ಇರುವ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಲಾರ್ವಾ ಪರೀಕ್ಷೆ: ಪಟ್ಟಣದ ಕೇಲವು ವಾರ್ಡಗಳಲ್ಲಿ ಚಿಕನ್‌ಗೂನ್ಯ, ಡೆಂ ಘೀ ಜ್ವರ ಕಾಣಿಸಿಕೊಂಡಿದ್ದು ಆರೋಗ್ಯ ಇಲಾಖೆ ಮುಂಜಾಗ್ರತೆ ಕ್ರಮ ಕೈಗೊಂಡು ಮನೆ ಮನೆಗೆ ತೆರಳಿ ಲಾರ್ವಾ ಪರೀಕ್ಷೆ ಮಾಡಲಾಗುತ್ತಿದೆ. ಸಾರ್ವಜನಿಕರು ಎಲ್ಲೆಂದರಲ್ಲಿ ನೀರು ಸಂಗ್ರಹಿಸಬಾರದು ಮತ್ತು ಮನೆಯ ಸುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಹಾಗೂ ಪರಿಸರವನ್ನು ಸ್ವಚ್ಛವಾಗಿಡುವಂತೆ ಅರಿವು ಮೂಡಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಆರೋಗ್ಯ ಸಹಾಯಕಿ ಉಷಾ, ಪುರಸಭೆ ಎಂಜಿನಿಯರ್ ಮಧುಸೂದನ್, ಶಿಕ್ಷಣ ಇಲಾಖೆಯ ಚಂದ್ರಮತಿ, ತಾಲೂಕು ಪಂಚಾಯಿತಿ ಅಧಿಕಾರಿ ದಯಾನಂದ್, ಸಿಡಿಪಿಒ ಕಚೇರಿಯ ತೇಜಸ್ವಿನಿ ಇತರರು ಇದ್ದರು.