Advertisement
ತಾಲೂಕಿನ ಚಪ್ಪರದಕಲ್ಲು ಸರ್ಕಲ್‌ನಲ್ಲಿರುವ ಜಿಲ್ಲಾಡಳಿತ ಭವನ, ಜಿಲ್ಲಾಧಿಕಾರಿ ಕಚೇರಿ ಆಡಿಟೋರಿಯಂದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ವತಿಯಿಂದ ನಾಗರಿಕ ಹಕ್ಕು ಸಂರಕ್ಷಣಾ ಅಧಿನಿಯಮ 1955, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ(ದೌರ್ಜನ್ಯ ಪ್ರತಿಬಂಧ)ಅಧಿನಿಯಮ 1989 ಎಸ್‌ಪಿ, ಟಿಎಸ್‌ಪಿ 2013 ಕಾಯ್ದೆ ಮತ್ತು
Related Articles
Advertisement
ಉಪನ್ಯಾಸ: ಬೆಂಗಳೂರು ರಾಷ್ಟ್ರೀಯ ಕಾನೂನು ಶಾಲೆ ತಳ ಸಮುದಾಯಗಳ ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಪಕ ಡಾ.ಆರ್.ವಿ.ಚಂದ್ರಶೇಖರ್ ಅವರು “ರಾಜ್ಯದಲ್ಲಿ ಮ್ಯಾನ್ಯುಯಲ್ ಸ್ಕಾವೆಂಜರ್, ಸಫಾಯಿ ಕರ್ಮಚಾರಿ ವೃತ್ತಿಯಲ್ಲಿ ತೊಡಗಿರುವವರನ್ನು ಮುಖ್ಯ ವಾಹಿನಿಗೆ ತರುವಲ್ಲಿ ಆಯೋಗದ ಪಾತ್ರ ಹಾಗೂ ಪೌರ ಕಾರ್ಮಿಕರಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳ ಬಗ್ಗೆ ಉಪನ್ಯಾಸ ನೀಡಿದರು.
ಪೊಲೀಸ್ ಉಪಾಧೀಕ್ಷಕ ಆರ್.ಜಯರಾಮ್, ಮೂರನೇ ಅವಧಿಯಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರವನ್ನು ಕಾನೂನು ಬಾಹಿರವಾಗಿ ಪಡೆದು ಉದ್ಯೋಗ ಪಡೆದಿರುವವರಿಗೆ ಕಾನೂನಿನಡಿ ಶಿಕ್ಷೆಗಳು ಮತ್ತು ಅವುಗಳನ್ನು ತಡೆಗಟ್ಟುವಲ್ಲಿ ಕಂದಾಯ ಇಲಾಖೆ ಅಧಿಕಾರಿಗಳ ಪಾತ್ರ ಹಾಗೂ ಕರ್ತವ್ಯ ಎಂಬ ವಿಷಯದ ಬಗ್ಗೆ ಮಾತನಾಡಿದರು.
ಡೈರೆಕ್ಟರ್ ಆಫ್ ಪ್ರಾಷಿಕ್ಯೂಷನ್‌ನ ಉಪ ನಿರ್ದೇಶಕ ಕೆ.ರುದ್ರಸ್ವಾಮಿ, ನಾಗರಿಕರ ಹಕ್ಕು ಜಾರಿ ನಿರ್ದೇಶನಾಲಯ ಹಾಗೂ ನಾಗರಿಕ ಹಕ್ಕು ಸಂರಕ್ಷಣ ಅಧಿನಿಯಮ 1955, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ(ದೌರ್ಜನ್ಯ ಪ್ರತಿಬಂಧ) ಅಧಿನಿಯಮ 1989ಕ್ಕೆ ಸಂಬಂಧಿಸಿಂತೆ ಉಪನ್ಯಾಸ ನೀಡಿದರು.
ಕಾರ್ಯಾಗಾರದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್.ಲತಾ, ಮುಖ್ಯ ಯೋಜನಾಧಿಕಾರಿ ವಿನೂತಾ ರಾಣಿ, ಪೊಲೀಸ್ ಅಧೀಕ್ಷರ ಕೆ.ಬಿ.ಪಿ. ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪ್ರೇಮನಾಥ್ ಮತ್ತು ಸಂಪನ್ಮೂಲ ವ್ಯಕ್ತಿಗಳು ಹಾಗೂ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಮತ್ತಿತರರು ಭಾಗವಹಿಸಿದ್ದರು.