Advertisement

ಕೊಬ್ಬರಿಗೆ 20 ಸಾವಿರ ರೂ. ಬೆಂಬಲ ಬೆಲೆ ನೀಡಲು ಆಗ್ರಹ

12:57 PM Feb 18, 2023 | Team Udayavani |

ತಿಪಟೂರು: ಕ್ವಿಂಟಲ್‌ ಕೊಬ್ಬರಿಗೆ 20ಸಾವಿರ ರೂ ಬೆಂಬಲ ಬೆಲೆ ನಿಗದಿಪಡಿಸುವಂತೆ ಆಗ್ರಹ ಹಾಗೂ ಸರ್ಕಾರದ ರೈತ ವಿರೋಧಿ ಮತ್ತು ತಾತ್ಸಾರ ಧೋರಣೆಯನ್ನು ಖಂಡಿಸಿ ಕೊಬ್ಬರಿ ಬೆಳೆಗಾರರ ಹೋರಾಟ ಸಮಿತಿ ವತಿಯಿಂದ ಫೆ.20ರ ಬೆಳಗ್ಗೆ 10.30ಕ್ಕೆ ಉಪವಿಭಾಗಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಬಿ.ಯೋಗೀಶ್ವರಸ್ವಾಮಿ ತಿಳಿಸಿದರು.

Advertisement

ನಗರದ ಎಪಿಎಂಸಿ ರೈತ ಭವನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೈತ ಸಂಘಟನೆ ಗಳು ಕೊಬ್ಬರಿಗೆ ಬೆಂಬಲ ಬೆಲೆ ಹೆಚ್ಚಿಸಬೇಕೆಂದು ಹಲವಾರು ವರ್ಷಗಳಿಂದ ಹೋರಾಟ ಮಾಡು ತ್ತಲೇ ಬರುತ್ತಿವೆ. ಕೇಂದ್ರ ಸರ್ಕಾರ ಪುಡಿಗಾಸಿನ ಆಸೆ ತೋರಿಸಿದೆ. ಕೊಬ್ಬರಿ ಬೆಲೆ ಬಗ್ಗೆ ಚಕಾರ ವೆತ್ತುತ್ತಿಲ್ಲ. ಮನೆ ನಿರ್ವಹಣೆ, ಆಸ್ಪತ್ರೆ ಖರ್ಚು, ಮಕ್ಕಳ ವಿದ್ಯಾಭ್ಯಾಸಕ್ಕೆ ಹೈನುಗಾರಿಕೆ ಯನ್ನು ನಂಬಿ ಬದುಕುವಂತಾಗಿದೆ ಎಂದು ದೂರಿದರು.

ಬೆಂಬಲ ಬೆಲೆ ನೀಡಿ: ಕೊಬ್ಬರಿ ಧಾರಣೆ ಕುಸಿತ ತೆಂಗು ಬೆಳೆಗಾರರಿಗೆ ದೊಡ್ಡ ಆಘಾತವನ್ನುಂಟು ಮಾಡಿದ್ದು ಮುಂದೆ ಇದೇ ರೀತಿ ಕೊಬ್ಬರಿ ಬೆಲೆ ಇಳಿಕೆಯಾಗುತ್ತಿದ್ದರೆ ರೈತರು ಕೃಷಿಯಿಂದ ವಿಮುಖರಾಗಿ ಆಹಾರ ಕೊರತೆ ಎದುರಾಗಲಿದೆ. ಸರ್ಕಾರಗಳು ಎಚ್ಚೆತ್ತು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡಬೇಕೆಂದು ಒತ್ತಾಯಿಸಿದರು.

ರೈತ ವಿರೋಧಿ ಧೋರಣೆ: ಸಮಿತಿ ಕಾರ್ಯ ದರ್ಶಿ ಎಸ್‌.ಎನ್‌.ಸ್ವಾಮಿ ಮಾತನಾಡಿ, ಕೊಬ್ಬರಿ ಬೆಲೆ ತೀವ್ರ ಕುಸಿತವಾಗಿದ್ದರೂ ಸರ್ಕಾರ ರೈತರನ್ನು ಕಾಪಾಡುವ ಬದಲು ಮೌನ ವಹಿಸಿದ್ದು ರೈತರ ಬದುಕು ದುಸ್ತರವಾಗಿದೆ. ಕೃಷಿ ಖರ್ಚು ಮತ್ತು ಜೀವನ ನಡೆಸಲು ಸಾಧ್ಯವಾಗದ ಸ್ಥಿತಿ ಬಂದಿದೆ. ರೈತ ಬದುಕುಳಿಯಬೇಕಾದರೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಜಾಸ್ತಿ ಮಾಡಬೇಕು. ಸರ್ಕಾ ರದ ತೋಟಗಾರಿಕಾ ಇಲಾಖೆ ಕಾರ್ಯದರ್ಶಿಗಳೇ 16,700ರೂ ಗೆ ಕೊಬ್ಬರಿ ಬೆಲೆ ಹೆಚ್ಚಳ ಮಾಡಬೇ ಕೆಂದು ಹೇಳಿದರೂ ಸರ್ಕಾರ ರೈತ ವಿರೋಧಿ ಧೋರಣೆ ಅನುಸ ರಿಸುತ್ತಿದೆ. ಕೊಬ್ಬರಿಗೆ ಕನಿಷ್ಠ 20ಸಾವಿರ ಬೆಂಬಲ ಬೆಲೆ ನಿಗದಿ ಮಾಡಬೇಕು, ರಾಜ್ಯ ಸರ್ಕಾರ 5ಸಾವಿರ ರೂ. ಪ್ರೋತ್ಸಾಹ ಧನ ಕೊಡಬೇಕೆಂದು ಪ್ರತಿಭಟನೆ ಹಮ್ಮಿಕೊಂಡಿದ್ದು ಅರಸೀಕೆರೆ ಸೇರಿ ವಿವಿಧ ಭಾಗಗಳಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ನಿರ್ಲಕ್ಷ್ಯ ತೋರುತ್ತಿದ್ದಾರೆ: ಸಮಿತಿ ಸಹ ಕಾರ್ಯದರ್ಶಿ ಜಯಚಂದ್ರ ಶರ್ಮ ಮಾತನಾಡಿ, ರೈತರ ಹೆಸರೇಳಿಕೊಂಡು ಅಧಿಕಾರಕ್ಕೆ ಬರುವ ರಾಜಕಾರಣಿಗಳು ರೈತರ ಪರವಾಗಿಲ್ಲ. ತಮಗೆ ಬೇಕಾದ ಕಾನೂನು ಮಾಡಿಕೊಂಡು ಅವರ ಸಂಬಳವನ್ನು ಸದ್ದಿಲ್ಲದೆ ಹೆಚ್ಚಿಸಿಕೊಳ್ಳುತ್ತಾರೆ. ರೈತ ಸಾಲ ಮಾಡಿ ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ ಮಾಡದೆ ಅವರ ಬದುಕಿನಲ್ಲಿ ಚೆಲ್ಲಾಟವಾಡುತ್ತಿದ್ದಾರೆ. ಈ ಬಾರಿ ಬಜೆಟ್‌ನಲ್ಲಿ ಅಡಕೆ ಮತ್ತು ರಾಗಿಗೆ ಬೆಂಬಲ ಬೆಲೆ ನೀಡಿದರೂ ಕೊಬ್ಬರಿ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಇಬ್ಬರು ಸಚಿವರಿದ್ದರೂ ತೆಂಗು ಬೆಳೆಗಾರರ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಸರ್ಕಾರ ರೈತರಿಗೆ ಶೂನ್ಯ ಕೊಡುಗೆ ನೀಡಿದ್ದು ಮುಂದಿನ ದಿನಗಳಲ್ಲಿ ರೈತರೇ ಪಾಠ ಕಲಿಸಲಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಅರಸೀಕೆರೆ ಉಪಾಧ್ಯಕ್ಷ ಮಧುಸೂದನ್‌, ತಾಲೂಕು ಉಪಾಧ್ಯಕ್ಷ ಬಸ್ತಿಹಳ್ಳಿ ರಾಜಣ್ಣ, ಸಹ ಕಾರ್ಯದರ್ಶಿ ಸಿದ್ದಯ್ಯ, ಚಿದಾ ನಂದ್‌ ಬಳುವನೇರಲು, ಯೋಗಾನಂದಸ್ವಾಮಿ, ದೇವರಾಜು ತಿಮ್ಲಾಪುರ, ಎಸ್‌.ಪ್ರಕಾಶ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next