Advertisement

Kochi blast: ಗಾಯಗೊಂಡ ಮತ್ತೂಬ್ಬ ವ್ಯಕ್ತಿ ಸಾವು

11:14 PM Nov 12, 2023 | Team Udayavani |

ಕೊಚ್ಚಿ: ಕೇರಳದ ಕೊಚ್ಚಿಯಲ್ಲಿ ಅ.29ರಂದು ಸಂಭವಿಸಿದ ತ್ರಿವಳಿ ಸ್ಫೋಟದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಅಸುನೀಗಿದ್ದಾರೆ. ಹೀಗಾಗಿ, ದುರಂತದಲ್ಲಿ ಕೊನೆಯುಸಿರೆಳೆದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ ಎಂದು ಸರ್ಕಾರಿ ಆಸ್ಪತ್ರೆ ಬಿಡುಗಡೆ ಮಾಡಿದ ವೈದ್ಯಕೀಯ ಬುಲೆಟಿನ್‌ನಲ್ಲಿ ಉಲ್ಲೇಖೀಸಲಾಗಿದೆ.

Advertisement

ಕ್ರಿಶ್ಚಿಯನ್‌ ಸಮುದಾಯದ ಧಾರ್ಮಿಕ ಕಾರ್ಯಕ್ರಮದಲ್ಲಿ ಸ್ಫೋಟ ಸಂಭವಿಸಿತ್ತು. ಆಗ 17 ಮಂದಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಎಂಟು ಮಂದಿ ಐಸಿಯುನಲ್ಲಿದ್ದರೆ, ಒಂಭತ್ತು ಮಂದಿ ಸಾಮಾನ್ಯ ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next