ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮನೆಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮದೆ ಮತ್ತು ಕರ್ಣಂಗೇರಿಯಲ್ಲಿ 55 ಮನೆಗಳ ನಿರ್ಮಾಣ ಕಾಮಗಾರಿ ಮೇಲ್ಛಾವಣಿ ಹಂತ ತಲುಪಿದೆ ಎಂದು ವಿವರಿಸಿದರು. ಪ್ರಥಮ ಹಂತದಲ್ಲಿ ಮನೆ ಕಳೆದುಕೊಂಡ 840 ನಿರಾಶ್ರಿತರನ್ನು ಗುರುತಿಸಲಾಗಿತ್ತು, ಬಳಿಕ ಕೆಲವರ ಹೆಸರು ಕೈಬಿಟ್ಟಿದೆ ಎಂಬ ದೂರುಗಳು ಕೇಳಿಬಂದು, ಕೈಬಿಟ್ಟಿರುವವರನ್ನು ಸೇರ್ಪಡೆ ಮಾಡಲು ಕ್ರಮ ವಹಿಸಲಾಗಿದೆ. ಈಗಾಗಲೇ ಜಂಬೂರು ಮದೆ, ಕರ್ಣಂಗೇರಿ ಮತ್ತಿತರ ಕಡೆಗಳ ಮನೆ ನಿರ್ಮಾಣ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಮೊದಲ ಆದ್ಯತೆಯಲ್ಲಿ ರಾಜೀವ್ ಗಾಂಧಿ ವಸತಿ ನಿಗಮದಿಂದ ಸಂತ್ರಸ್ತರಿಗೆ ಮನೆ ನಿರ್ಮಿಸಲಾಗುವುದು, ಬಳಿಕ ಸಂತ್ರಸ್ತರು ಸ್ವತಃ ಮನೆ ಕಟ್ಟಿಕೊಳ್ಳಲು ಮುಂದೆ ಬಂದವರಿಗೆ ಹಣ ಪಾವತಿಸುವುದು, ಮೂರನೇ ಆದ್ಯತೆ ಸಂತ್ರಸ್ತರ ಜಾಗದಲ್ಲಿ ಏಜನ್ಸಿಗಳ ಮೂಲಕ ಮನೆ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು. ಇವರಲ್ಲಿ ಈಗಾಗಲೇ ಇನ್ಫೋಸಿಸ್ ಸಂಸ್ಥೆಗೆ ಜಂಬೂರಿನಲ್ಲಿ ಜಾಗ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು.
Advertisement