Advertisement

Kodagu: ಬೈಕ್ ಅಪಘಾತ; ಸವಾರಿಬ್ಬರು ಮೃತ್ಯು

10:41 AM Nov 07, 2023 | Team Udayavani |

ಕೊಡಗು: ಬೈಕ್ ಅಪಘಾತವಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಬಿರ್ಚಿವುಡ್ ರೆಸಾರ್ಟ್ ಸಮೀಪ ನಡೆದಿದೆ.

Advertisement

ಸುಂಟಿಕೊಪ್ಪದ ಮದುರಮ ಬಡಾವಣೆ ನಿವಾಸಿಗಳಾದ ಉದಯ(25) ಚಂದನ್(26) ಮೃತ ದುರ್ಧೈವಿಗಳು ಎಂದು ತಿಳಿದು ಬಂದಿದೆ.

ಕುಶಾಲನಗರದಿಂದ ಸುಂಟಿಕೊಪ್ಪಕ್ಕೆ ಬರುವಾಗ ಈ ಅವಘಡ ಸಂಭವಿಸಿದ್ದು, ಬೈಕ್‌ ಲೈಟ್ ಕಂಬಕ್ಕೆ ಅಪ್ಪಳಿಸಿದ ಪರಿಣಾಮ ಸವಾರರು ಸ್ಥಳದಲ್ಲೇ ಮೃತಪಟ್ಟರು.

ನ.6ರ ಸೋಮವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ಇಂದು ಮುಂಜಾನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next