ಡಿ. ದೇವರಾಜ ಅರಸು ಅವರ 102ನೇ ಜನ್ಮ ದಿನಾಚರಣೆ ಆಯೋಜಿಸುವ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.
Advertisement
ಜಿಲ್ಲಾಧಿಕಾರಿ ಡಾ| ರಿಚರ್ಡ್ ವಿನ್ಸೆಂಟ್ ಡಿ’ಸೋಜಾ ಅವರು ಮಾತನಾಡಿ ಹಿಂದುಳಿದ ವರ್ಗದ ಹರಿಕಾರ ಎಂದೇ ಖ್ಯಾತರಾದ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿ ಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳು ವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗೆ ನಿರ್ದೇಶ ನೀಡಿದರು.ಡಿ. ದೇವರಾಜ ಅರಸು ಅವರು ಮುಖ್ಯಮಂತ್ರಿ ಯಾಗಿದ್ದ ಅವಧಿಯಲ್ಲಿ ಭೂ ಸುಧಾರಣೆ ಕಾನೂ ನುಗಳು, ಹಾವನೂರು ಆಯೋಗ ರಚನೆ, ಮಲ ಹೊರುವ ಪದ್ಧತಿ ನಿಷೇಧ, ಉಳುವವನೇ ಭೂಮಿಯ ಒಡೆಯ ಹೀಗೆ ಹತ್ತು ಹಲವು ಸಾಮಾಜಿಕ ಸುಧಾರಣಾ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಸಮಾನತೆಯ ಸಮಾಜ ನಿರ್ಮಾಣಕ್ಕೆ ಶ್ರಮಿಸಿದರು. ಆ ನಿಟ್ಟಿನಲ್ಲಿ ಅರಸು ಅವರ 102ನೇ ಜನ್ಮ ದಿನಾಚರಣೆಯಲ್ಲಿ ಎಲ್ಲರನ್ನೂ ಒಟ್ಟುಗೂಡಿಸಿ ಆಚರಿಸುವಂತಾಗಬೇಕು. ಜನತೆಯ ಕಾರ್ಯಕ್ರಮ ಮಾದರಿಯಲ್ಲಿ ಅರ್ಥಪೂರ್ಣವಾಗಿ ನೆರವೇರಿಸಲು ಶ್ರಮಿಸಬೇಕು. ಇದಕ್ಕಾಗಿ ಎಲ್ಲ ಸಂಘ ಸಂಸ್ಥೆಗಳು ಸಹಕರಿಸುವಂತೆ ಜಿಲ್ಲಾಧಿಕಾರಿ ಅವರು ಮನವಿ ಮಾಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್ ಅವರು ಡಿ. ದೇವರಾಜ ಅರಸು ಜನ್ಮ ದಿನಾಚರಣೆ ಯನ್ನು ವ್ಯವಸ್ಥಿತವಾಗಿ ಆಯೋಜಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸಲಹೆ ನೀಡಿದರು.
ಬಿಸಿಎಂ ಇಲಾಖೆ ಅಧಿಕಾರಿ ಕೆ.ವಿ. ಸುರೇಶ್ ಅವರು ಡಿ. ದೇವರಾಜ ಅರಸು ಅವರ 102ನೇ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಇತರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ಅವರು ಕೋರಿದರು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾ ಖೆಯ ಉಪ ನಿರ್ದೇಶಕರಾದ ಪುಟ್ಟಸ್ವಾಮಿ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ನಟೇಶ್, ಪೊಲೀಸ್ ಇನ್ಸ್‌ಪೆಕ್ಟರ್ ಐ.ಪಿ. ಮೇದಪ್ಪ, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಸಿ. ಜಗನ್ನಾಥ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇ ಶರಾದ ಭಾಗ್ಯಲಕ್ಷ್ಮೀ, ತಹಶೀಲ್ದಾರ್ ಕುಸುಮಾ, ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಕೆ.ಸಿ. ದಯಾನಂದ ಮೊದಲಾದವರಿದ್ದರು.