Advertisement

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

12:53 AM Jan 02, 2025 | Team Udayavani |

ಮಡಿಕೇರಿ: ಜಮ್ಮು ಮತ್ತು ಕಾಶ್ಮೀರದ ಪೂಂಛ… ಜಿಲ್ಲೆಯಲ್ಲಿ ಸೇನಾ ವಾಹನ ಅಪಘಾತಕ್ಕೀಡಾಗಿ ಸಾವಿಗೀಡಾದ ಸೈನಿಕ ಪಿ.ಪಿ.ದಿವಿನ್‌ ಅವರ ಅಂತ್ಯಕ್ರಿಯೆ ಹುಟ್ಟೂರು ಕೊಡಗು ಜಿಲ್ಲೆಯ ಆಲೂರು ಸಿದ್ದಾಪುರ ಬಳಿಯ ಮಾಲಂಬಿ ಗ್ರಾಮದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಬುಧವಾರ ನೆರವೇರಿತು.

Advertisement

ಸಾಂಪ್ರದಾಯಿಕ ವಿಧಿ ವಿಧಾನಗಳ ಬಳಿಕ ಮಾಲಂಬಿಯ ಜಮೀನಿನಲ್ಲಿ ಅಗ್ನಿ ಸ್ಪರ್ಶ ಮಾಡುವುದರೊಂದಿಗೆ ದಿವಿನ್‌ ಪಂಚಭೂತಗಳಲ್ಲಿ ಲೀನರಾದರು.

ಇದಕ್ಕೂ ಮೊದಲು ಮೇ| ನಿಖೀಲ್‌ ಹಾಗೂ ಸುಬೇದಾರ್‌ ಮಹೇಶ್‌ ಜಾಧವ್‌ ನೇತೃತ್ವದಲ್ಲಿ ಆಗಮಿಸಿದ್ದ ಭಾರತೀಯ ಸೇನಾ ತಂಡ ಹಾಗೂ ಪೊಲೀಸರು ಕುಶಾಲತೋಪು ಸಿಡಿಸಿ ಅಂತಿಮ ಗೌರವ ಸಲ್ಲಿಸಿದರು.

ಮಂಗಳವಾರ ರಾತ್ರಿ ಬೆಂಗಳೂರಿ ನಿಂದ ಪಾರ್ಥಿವ ಶರೀರವನ್ನು ಸೇನಾ ವಾಹನದ ಮೂಲಕ ಕುಶಾಲನಗರಕ್ಕೆ ತರಲಾಗಿತ್ತು. ಬುಧವಾರ ಬೆಳಗ್ಗೆ 8ರಿಂದ 11 ಗಂಟೆ ವರೆಗೆ ಕುಶಾಲನಗರದ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೆಂಕಟರಾಜ ಸಹಿತ ಪ್ರಮುಖರು ಉಪಸ್ಥಿತರಿದ್ದರು.ಬಳಿಕ ದಿವಿನ್‌ ಅವರ ಪಾರ್ಥಿವ ಶರೀರವನ್ನು ಸೇನಾ ವಾಹನದಲ್ಲಿ ಕುಶಾಲ ನಗರದ ಪ್ರಮುಖ ಬೀದಿಯಿಂದ ಮೆರ ವಣಿಗೆ ಹೊರಟು ಕೂಡಿಗೆ, ಹೆಬ್ಟಾಲೆ ಮಾರ್ಗ ಹುಟ್ಟೂರಾದ ಆಲೂರು ಸಿದ್ದಾಪುರ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು,ಈ ಸಂದರ್ಭ ಮಾಜಿ ಸ್ಪೀಕರ್‌ ಕೆ.ಜಿ.ಬೋಪಯ್ಯ, ಮಾಜಿ ಸಚಿವರಾದ ಎಂ.ಪಿ.ಅಪ್ಪಚ್ಚು ರಂಜನ್‌, ಎಸ್‌ಪಿ ಕೆ.ರಾಮರಾಜನ್‌ ಸಹಿತ ಪ್ರಮುಖರು ಉಪಸ್ಥಿತರಿದ್ದರು.

Advertisement

ಅನಂತರ ಪಾರ್ಥಿವ ಶರೀರವನ್ನುಮಾಲಂಬಿಯ ಮನೆಗೆ ಕೊಂಡೊಯ್ಯ ಲಾಯಿತು. ಅಲ್ಲೂ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಯಿತು.

ದಿವಿನ್‌ ಅವರ ತಾಯಿ ಜಲಜಾಕ್ಷಿ ಸಹಿತ ಬಂಧುಗಳ ಕಟ್ಟೆಯೊಡೆದ ದುಃಖದ ನಡುವೆ ಸಂಬಂಧಿ ಚಿರಾಗ್‌ ಅವರು ಅಂತಿಮ ವಿಧಿಗಳನ್ನು ನೆರವೇರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next