Advertisement
ಏಕಕಾಲಕ್ಕೆ 30 ಸಾವಿರ ಮಂದಿ ಆಸೀನರಾಗಿ ಪಂದ್ಯಾಟ ವೀಕ್ಷಿಸಲು ಅನುಕೂಲವಾಗುವಂತೆ ಮೈದಾನದ ಸುತ್ತಲೂ ಗ್ಯಾಲರಿ ನಿರ್ಮಾಣವಾಗಿದೆ. ಗಣ್ಯಾತಿಗಣ್ಯರಿಗೆ ಪ್ರತ್ಯೇಕ ಆಸನ ವ್ಯವಸ್ಥೆಗಳಿದ್ದು, ಅಂತಾರಾಷ್ಟ್ರೀಯ ಗುಣಮಟ್ಟದ ಮಾದರಿಯಲ್ಲಿ 3 ಮೈದಾನಗಳನ್ನು ಸಿದ್ಧಗೊಳಿಸಲಾಗಿದೆ. ಪ್ರತೀ ಮೈದಾನದಲ್ಲಿ ದಿನಕ್ಕೆ 6 ಪಂದ್ಯಗಳಂತೆ ಒಟ್ಟು 18 ಪಂದ್ಯಗಳು ನಡೆಯಲಿವೆ.
ಕುಂಡ್ಯೋಳಂಡ ಹಾಕಿ ಹಬ್ಬದ ವಿಜೇತ ತಂಡಕ್ಕೆ 4ಲಕ್ಷ ರೂ., ದ್ವಿತೀಯ ತಂಡಕ್ಕೆ 3ಲಕ್ಷ ರೂ. ತೃತೀಯ ತಂಡಕ್ಕೆ 2 ಲಕ್ಷ ರೂ. ಮತ್ತು 4ನೇ ಸ್ಥಾನದ ತಂಡಕ್ಕೆ ಒಂದು ಲಕ್ಷ ರೂ. ನಗದು ನೀಡಲಾಗುವುದು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರು ಕೂಟವನ್ನು ಉದ್ಘಾಟಿಸಲಿದ್ದಾರೆ.
Related Articles
ಕುಂಡ್ಯೋಳಂಡ ಹಾಕಿ ಹಬ್ಬಕ್ಕೆ 2 ಕೋಟಿ ರೂ. ಖರ್ಚಾಗುತ್ತಿದ್ದು, ಕುಂಡ್ಯೋಳಂಡ ಕುಟುಂಬಸ್ಥರಿಂದ ರೂ. 30ಲಕ್ಷ ಸಂಗ್ರಹಿಸಲಾಗಿದೆ. ಕಳೆದ ವರ್ಷದ ಹಾಕಿ ಹಬ್ಬಕ್ಕೆ ಸರಕಾರ ಒಂದು ಕೋಟಿ ರೂ. ನೀಡಿತ್ತು.
Advertisement
2025: ಮುದ್ದಂಡ ಹಾಕಿ ಹಬ್ಬ2025ರ 25ನೇ ಆವೃತ್ತಿಯ ಕೊಡವ ಕುಟುಂಬಗಳ ನಡುವಿನ ಹಾಕಿಹಬ್ಬ ನಡೆಸಲು ಹಾಕಿ ಅಕಾಡೆಮಿಯು ಮುದ್ದಂಡ ಕುಟುಂಸ್ಥರಿಗೆ ಅವಕಾಶ ನೀಡಿದೆ. ಈ ಹಾಕಿಹಬ್ಬ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವುದು ವಿಶೇಷ.