Advertisement

ಕೊಡಗು: ಓರ್ವ ಸಾವು, 33 ಪಾಸಿಟಿವ್

06:48 AM Sep 16, 2020 | mahesh |

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಂಗಳವಾರ 33 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಮಡಿಕೇರಿ ತಾಲೂಕು ಎಮ್ಮೆಮಾಡು ಗ್ರಾಮದ 50 ವರ್ಷದ ಪುರುಷರೊಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ.

Advertisement

ಅಧಿಕ ರಕ್ತದೊತ್ತಡ, ಮಧುಮೇಹದಿಂದ ಬಳಲುತ್ತಿದ್ದ ಅವರಿಗೆ ಇತ್ತೀಚೆಗೆ ಪಾರ್ಶ್ವವಾಯು ಬಾಧಿಸಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮರಳಿದ್ದರು. ಸೆ. 8ರಂದು ಕಫ‌ ಸಮಸ್ಯೆಯಿಂದ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಬಂದಿದ್ದರು. ತಪಾಸಣೆ ವೇಳೆ ಕೋವಿಡ್‌ ಸೋಂಕು ದೃಢಪಟ್ಟಿತ್ತು. ಮಂಗಳವಾರ ಬೆಳಗ್ಗೆ ಅವರು ಮೃತಪಟ್ಟರು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next