Advertisement

ಕೊಡಗು: ವಾರದದಲ್ಲಿ 4 ದಿನ ಅಂಗಡಿ ತೆರೆಯಲು ಅವಕಾಶ

02:33 AM Apr 29, 2020 | Sriram |

ಮಡಿಕೇರಿ: ಕೊಡಗು ಜಿಲ್ಲೆ ಕೋವಿಡ್‌-19 ಮುಕ್ತವಾಗಿ ಹಸಿರು ವಲಯಕ್ಕೆ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ವಾರದಲ್ಲಿ ನಾಲ್ಕು ದಿನ ಬೆಳಗ್ಗೆ 6ರಿಂದ ಸಂಜೆ 4 ಗಂಟೆಯವರೆಗೆ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡಲು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಸಮ್ಮತಿ ಸೂಚಿಸಿದ್ದಾರೆ.

Advertisement

ಮಂಗಳವಾರ ನಗರದ ಜಿ.ಪಂ. ಸಭಾಂಗಣದಲ್ಲಿ ಸಚಿವ ವಿ. ಸೋಮಣ್ಣ ಅಧ್ಯಕ್ಷತೆಯಲ್ಲಿ ಕೋವಿಡ್‌-19 ಬಗ್ಗೆ ಜಿಲ್ಲೆಯಲ್ಲಿ ಕೈಗೊಂಡ ಮುಂಜಾಗ್ರತಾ ಕ್ರಮಗಳು ಸೇರಿದಂತೆ ಸ್ವತ್ಛತೆ ಹಾಗೂ ಸಾರ್ವಜನಿಕ ಆರೋಗ್ಯ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

ಜಿಲ್ಲೆಯಲ್ಲಿ ಕೋವಿಡ್‌-19 ವೈರಸ್‌ ನಿಯಂತ್ರಿಸುವಲ್ಲಿ ಸಾರ್ವಜನಿಕ ಸಹಕಾರ ಹೆಚ್ಚಿನದ್ದಾಗಿದೆ. ಆ ನಿಟ್ಟಿನಲ್ಲಿ ಪ್ರಧಾನ ಮಂತ್ರಿಗಳು ಮತ್ತು ಮುಖ್ಯಮಂತ್ರಿ ಅವರಿಗೆ ಅಭಿನಂದನೆ ಸಲ್ಲಿಸಬೇಕಾಗಿದೆ ಎಂದು ಎದ್ದು ನಿಂತ ಸಚಿವರು ತಾವು ಚಪ್ಪಾಳೆ ತಟ್ಟುವುದರೊಂದಿಗೆ ಸಭೆಯಲ್ಲಿದ್ದ ವರೂ ಚಪ್ಪಾಳೆ ತಟ್ಟುವ ಮೂಲಕ ಅಭಿನಂದನೆ ಸಲ್ಲಿಸಿದರು.

ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್‌ ಮಾತನಾಡಿ, ಜೂನ್‌ ತಿಂಗಳಿನಿಂದ ಮುಂಗಾರು ಮಳೆ ಆರಂಭವಾ ಗುವುದರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಅವಕಾಶ ಮಾಡಬೇಕು. ಮರಳು ತೆಗೆ ಯಲು ಅವಕಾಶ ಮಾಡಬೇಕು ಎಂದು ಕೋರಿದರು.

Advertisement

Udayavani is now on Telegram. Click here to join our channel and stay updated with the latest news.

Next