ಮಡಿಕೇರಿ : ಇತ್ತೀಚೆಗೆ ಮಂಗಳೂರಿನಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರ ತನಿಖಾ ತಂಡವು ದಕ್ಷಿಣ ಕೊಡಗಿನ ಹೋಂಸ್ಟೇ ಒಂದಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ.
Advertisement
ಪೊನ್ನಂಪೇಟೆ ತಾಲೂಕಿನ ಟಿ. ಶೆಟ್ಟಿಗೇರಿ ಸಮೀಪದ ನೆಮ್ಮಲೆ ಗ್ರಾಮದ ಹೋಂಸ್ಟೇಯಲ್ಲಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳು ತಂಗಿದ್ದರು ಎನ್ನುವ ಸಂಶಯದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಹೋಂಸ್ಟೇ ಮಾಲಕರನ್ನು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.