Advertisement

ಕೊಡಗು ಪ್ರವಾಸಿಗರಿಗೆ ಗುಡ್ ನ್ಯೂಸ್ : ಜಿಲ್ಲಾ ಪ್ರವಾಸಿ ತಾಣಗಳು ಪ್ರವಾಸಿಗರಿಗೆ ಮುಕ್ತ

01:41 PM Sep 06, 2020 | sudhir |

ಮಡಿಕೇರಿ : ಪ್ರವಾಸಿಗರ ನೆಚ್ಚಿನ ತಾಣವಾದ ಮಡಿಕೇರಿ ಇನ್ನು ಮುಂದಿನ ದಿನಗಳಲ್ಲಿ ಪ್ರವಾಸಿಗರಿಗೆ ಮುಕ್ತವಾಗಲಿದೆ, ಕಳೆದ ಹಲವು ತಿಂಗಳಿನಿಂದ ಕೋವಿಡ್ ಲಾಕ್ ಡೌನ್ ಜಾರಿಯಾದ ನಂತರ ಪ್ರವಾಸಿ ತಾಣಗಳನ್ನು ನಿರ್ಬಂಧ ಹೇರಲಾಗಿತ್ತು ಈಗ ಹೆಚ್ಚಿನ ಪ್ರದೇಶಗಳಲ್ಲಿ ನಿರ್ಬಂಧಗಳನ್ನು ತೆರವು ಗೊಳಿಸುವ ಕಾರ್ಯ ನಡೆಯುತ್ತಿದ್ದು ಅಂತೆಯೇ ಕೊಡಗು ಜಿಲ್ಲೆಯು ಪ್ರವಾಸಿಗಳಿಗರಿಗೆ ಮುಕ್ತವಾಗಲಿದೆ.

Advertisement

ರಾಜ್ಯದಲ್ಲಿ ಕೋವಿಡ್ ಮಹಾ ಮಾರಿ ಹೊಡೆತಕ್ಕೆ ಜಿಲ್ಲೆಯ ಪ್ರವಾಸಿ ತಾಣಗಳು ಬಣಗುಡುತ್ತಿದ್ದೆ ಅಲ್ಲದೆ ಪ್ರವಾಸೋದ್ಯಮ ಇಲಾಖೆಗೂ ಸಾಕಷ್ಟು ನಷ್ಟ ಸಂಭವಿಸಿದ್ದು ಹಾಗಾಗಿ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಹೆಚ್ಚಿನ ಸ್ಥಳಗಳನ್ನು ಪ್ರವಾಸಿಗಳಿಗರಿಗೆ ಮುಕ್ತಗೊಳಿಸುವ ಕೆಲಸಗಳನ್ನು ಮಾಡುತ್ತಿದ್ದಾರೆ ಎನ್ನಲಾಗಿದೆ.

ಕೊಡಗು ಜಿಲ್ಲಾಡಳಿತ ಪ್ರವಾಸಿ ತಾಣಗಳಿಗೆ ಹಸಿರು ನಿಶಾನೆ ತೋರಿಸಿದ್ದು ಹಂತ ಹಂತವಾಗಿ ಜಿಲ್ಲೆಯ ಪ್ರವಾಸಿ ಸ್ಥಳಳಿಗೆ ಭೇಟಿ ನೀಡಲು ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

ಮಡಿಕೇರಿಯ ರಾಜ ಸೀಟ್, ಅಬ್ಬಿ ಫಾಲ್ಸ್ ,ಕುಶಲ ನಗರದಲ್ಲಿರುವ ಕಾವೇರಿ ನಿಸರ್ಗಧಾಮಗಳಿಗೆ ಭೇಟಿ ನೀಡಲು ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಡಳಿತ ಹೇಳಿದೆ.

Advertisement

ಪ್ರವಾಸಿಗರು ಜಿಲ್ಲಾಡಳಿತದ ಮಾರ್ಗದರ್ಶನವನ್ನು ಪಾಲಿಸಿಕೊಂಡು ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಮಾಡುವುದು ಕಡ್ಡಾಯವಾಗಿದೆ.

ಸೆಪ್ಟೆಂಬರ್ 15ರ ಬಳಿಕ ದುಬಾರೆ ಪ್ರವಾಸಿಗರಿಗೆ ಮುಕ್ತವಾಗಲಿದೆ ಎಂದು ಜಿಲ್ಲಾಡಳಿತ ಹೇಳಿಕೆ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next