Advertisement
ಕಾರ್ಯಕ್ರಮಗಳ ವಿವರಗಳು ಈ ಕೆಳಗಿನಂತಿವೆ:ನವಂಬರ್ 18, ರವಿವಾರ : ‘ಭಾರತೀಯ ಸನ್ನಿವೇಶದಲ್ಲಿ ತಂತ್ರಜ್ಞಾನ ಮತ್ತು ಆವಿಷ್ಕಾರ’ ಎಂಬ ವಿಷಯದ ಮೇಲೆ ಐಐಟಿಬಿ, ಮೊನಾಶ್ ರಿಸರ್ಚ್ ಅಕಾಡೆಮಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ (CEO) ಡಾ. ಮುರಳಿ ಶಾಸ್ತ್ರಿ ಅವರು ಶ್ರೀ ವಾಸುದೇವ ಉಡುಪ, ಶ್ರೀ ರಾಮಕೃಷ್ಣ ಉಡುಪ ಮತ್ತು ಶ್ರೀ ಕೆ.ಜಿ. ಉಡುಪ ಸ್ಮಾರಕ ಉಪನ್ಯಾಸವನ್ನು ನೀಡಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಇದರ ರಿಜಿಸ್ಟ್ರಾರ್ ಆಗಿರುವ ಡಾ. ನಾರಾಯಣ ಸಭಾಹಿತ್ ಅವರು ವಹಿಸಿಕೊಳ್ಳಲಿದ್ದಾರೆ. ಈ ಉಪನ್ಯಾಸ ಕಾರ್ಯಕ್ರಮವು ಬೆಳಿಗ್ಗೆ 10.00 ಗಂಟೆಯಿಂದ 11.00 ಗಂಟೆಯವರೆಗೆ, ಮಣಿಪಾಲದ ಇಂಟರಾಕ್ಟ್ LH ಕಾಂಪ್ಲೆಕ್ಸ್ ನ ನೆಲಮಹಡಿಯಲ್ಲಿರುವ ಸಭಾಂಗಣದಲ್ಲಿ ನಡೆಯಲಿದೆ.
Related Articles
ಶಿಕ್ಷಣ ಮತ್ತು ಬೋಧನೆ, ಸಮುದಾಯ, ಆರೋಗ್ಯ ಪಾಲನೆ, ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳು, ಬ್ಯಾಂಕಿಂಗ್, ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಆವಿಷ್ಕಾರಗಳು ಹಾಗೂ ಸಂಶೋಧನೆ, ಸಂವಹನ ಮತ್ತು ಪತ್ರಿಕೋದ್ಯಮ, ಸಾಹಿತ್ಯ, ಸಾಹಿತ್ಯಕ ಪ್ರಕಟನೆಗಳು ಮುಂತಾದ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆಯನ್ನು ಮಾಡಿರುವ ಸಾಧಕರನ್ನು ಗುರುತಿಸಿ ಅವರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸುವ ಉದ್ದೇಶದಿಂದ ಕೊಡೆತ್ತೂರು ಉಡುಪ ಕುಟುಂಬದ ಸದಸ್ಯರು ಟ್ರಸ್ಟ್ ಒಂದನ್ನು ಸ್ಥಾಪಿಸಿರುತ್ತಾರೆ. ಇದು ಮಾತ್ರವಲ್ಲದೆ ಈ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಗಂಭೀರ ಸ್ವರೂಪದ ಕಾಯಿಲೆಗಳಿಂದ ಬಳಲುತ್ತಿದ್ದು ಚಿಕಿತ್ಸಾ ವೆಚ್ಚವನ್ನು ಭರಿಸಲಾಗದಿರುವ ರೋಗಿಗಳಿಗೆ ಸೂಕ್ತ ಚಿಕಿತ್ಸಾ ವೆಚ್ಚವನ್ನು ಭರಿಸುವ ಕಾರ್ಯವನ್ನೂ ಸಹ ಈ ಟ್ರಸ್ಟ್ ಮಾಡಿಕೊಂಡು ಬರುತ್ತಿದೆ. ಇದೆಲ್ಲದರ ಜೊತೆಗೆ ಈ ಟ್ರಸ್ಟ್ ಪ್ರತೀ ವರ್ಷ ಮೂರು ಸ್ಮಾರಕ ದತ್ತಿನಿಧಿ ಉಪನ್ಯಾಸವನ್ನು ನಡೆಸಿಕೊಂಡು ಬರುತ್ತಿದೆ. ಈ ಎಲ್ಲಾ ಕಾರ್ಯಕ್ರಮಗಳ ಸದುಪಯೋಗವನ್ನು ಆಸಕ್ತರು ಪಡೆದುಕೊಳ್ಳಬೇಕು ಎಂಬ ಉದ್ದೇಶವನ್ನು ಟ್ರಸ್ಟ್ ಸದಸ್ಯರು ಪತ್ರಿಕಾ ಪ್ರಕಟನೆಯ ಮೂಲಕ ವ್ಯಕ್ತಪಡಿಸಿದ್ದಾರೆ.
Advertisement