ಕೋಟೇಶ್ವರ: ಇಲ್ಲಿನ ಶ್ರೀ ಕೋಟಿಲಿಂಗೇಶ್ವರ ದೇಗುಲದಲ್ಲಿ ಗುರುವಾರ ರಥೋತ್ಸವ ಸಂಭ್ರಮದಿಂದ ಜರಗಿತು.
ಪ್ರಧಾನ ತಂತ್ರಿ ಹಾಗೂ ಅರ್ಚಕ ಪ್ರಸನ್ನ ಕುಮಾರ್ ಐತಾಳ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಗಳು ನಡೆದವು. ಸಂಕಲ್ಪದಲ್ಲಿ ಕಾರ್ಯನಿರ್ವಹಣಾಧಿ ಕಾರಿ ಪ್ರಶಾಂತ ಕುಮಾರ್ ಶೆಟ್ಟಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಂ. ಪ್ರಭಾಕರ ಶೆಟ್ಟಿ, ಸಮಿತಿ ಸದಸ್ಯರು ಭಾಗವಹಿಸಿದ್ದರು. ಹೊರಪೌಳಿಯಲ್ಲಿ ಉತ್ಸವ ಮೂರ್ತಿಗೆ ವಿಶೇಷ ಪೂಜೆಯ ಬಳಿಕ ನಡೆದ ಬ್ರಹ್ಮರಥೋತ್ಸವದಲ್ಲಿ “ಹರ-ಹರ ಮಹಾದೇವ’ ಎಂಬ ಉದ್ಘೋಷದೊಂದಿಗೆ ಭಕ್ತರು ಪಾಲ್ಗೊಂಡರು.
ಗರುಡ ಪ್ರದಕ್ಷಿಣೆ: ರಥೋತ್ಸವ ಆರಂಭವಾಗುತ್ತಿದ್ದಂತೆ ವಾಡಿಕೆಯಂತೆ ಗರುಡ ಪ್ರದಕ್ಷಿಣೆ ನಡೆಯಿತು.
ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ವ್ಯವಸ್ಥಾಪನ ಸಮಿತಿ ಸದಸ್ಯರಾದ ಸುರೇಶ ಬೆಟ್ಟಿನ್, ಮಂಜುನಾಥ ಆಚಾರ್ಯ, ಚಂದ್ರಿಕಾಧನ್ಯ, ಭಾರತಿ, ಶಾರದಾ, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ನಿಕಟಪೂರ್ವ ಅಧ್ಯಕ್ಷ ಕೃಷ್ಣದೇವ ಕಾರಂತ ಕೋಣಿ, ಶ್ರೀ ಪಟ್ಟಾಭಿ ರಾಮಚಂದ್ರ ದೇಗುಲದ ಆಡಳಿತ ಧರ್ಮದರ್ಶಿ ಶ್ರೀಧರ ವಿಟuಲ ಕಾಮತ್, ಕೋಟೇಶ್ವರ ಗ್ರಾ.ಪಂ. ಅಧ್ಯಕ್ಷ ಕೃಷ್ಣ ಗೊಲ್ಲ, ಪಿಡಿಒ ದಿನೇಶ ನಾಯ್ಕ, ಉದ್ಯಮಿಗಳಾದ ಸು ಧೀರ್ ಕುಮಾರ್ ಶೆಟ್ಟಿ, ದಿನೇಶ ಕಾಮತ್ ಮೊದಲಾದವರು ಉಪಸ್ಥಿತರಿದ್ದರು.
ಡಿವೈಎಸ್‌ಪಿ ಶ್ರೀಕಾಂತ್, ಸರ್ಕಲ್ ಇನ್‌ಸ್ಪೆಕ್ಟರ್ ಗೋಪಿಕೃಷ್ಣ, ಎಸ್‌ಐ ಸದಾಶಿವ ಗವರೋಜಿ, ಟ್ರಾಫಿಕ್ ಎಸ್‌ಐ ಸುಧಾ ಪ್ರಭು ನೇತೃತ್ವದಲ್ಲಿ ಬಿಗು ಬಂದೋಬಸ್ತ್ ಏರ್ಪಡಿಸಲಾಗಿತ್ತು.