Advertisement

ಮತ್ತೆ ಕೈವಾರ ತಾತಯ್ಯನವರು ಹುಟ್ಟಿ ಬರುವ ಸೂಚನೆ ಸಿಕ್ಕಿದೆ!

03:57 PM Jun 09, 2023 | Team Udayavani |

ಕೋಲಾರ: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕೋಡಿಮಠದ ಸ್ವಾಮೀಜಿ ನುಡಿದಿದ್ದ ಭವಿಷ್ಯ ನಿಜವಾಗಿದೆ. ಯಾವುದೇ ಪಕ್ಷಗಳು ಒಟ್ಟಾಗಿ ಹೋಗುವುದಿಲ್ಲ. ಪಕ್ಷಾಂತರ ಹೆಚ್ಚಲಿವೆ. ಆದರೆ, ಒಂದೇ ಪಕ್ಷ ಅಧಿಕಾರವನ್ನು ಹಿಡಿಯಲಿದೆ ಎಂದು ಹೇಳಿದ್ದರು.

Advertisement

ಅದರಂತೆ ಇದೀಗ ರಾಜ್ಯದಲ್ಲಿ ಕಾಂಗ್ರೆಸ್‌ ಮಾತ್ರ ಏಕಾಂಗಿಯಾಗಿ ಅಧಿಕಾರಕ್ಕೆ ಬಂದಿದೆ. ಇದರ ಮಧ್ಯೆ ಇದೀಗ ಕೋಡಿ ಮಠದ ಡಾ.ಶಿವಾನಂದ ಮಹಾ ಸ್ವಾಮೀಜಿ ಮತ್ತೂಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಹಿಂದೆ ಹೇಳಿದಂತೆ ದುರಂತ ನಡೆದಿದೆ: ಗುರುವಾರ ತಾಲೂಕಿನ ಸುಗಟೂರು ಗ್ರಾಮದ ಯೋಗಿ ನಾರೇಯಣ ಮಠಕ್ಕೆ ಕೋಡಿಮಠದ ಶ್ರೀಗಳು ಭೇಟಿ ನೀಡಿದ್ದ ವೇಳೆ ಮಾತನಾಡಿದರು. ಈ ಹಿಂದೆ ಹೇಳಿದಂತೆ ರಾಜ್ಯದಲ್ಲಿ ಬಹುಮತದ ಸರ್ಕಾರ ಬಂದಿದೆ. ಈ ವರ್ಷದಲ್ಲಿ ದೊಡ್ಡ ಅವಘಡ ನಡೆಯುತ್ತೆ ಎಂದು ಹೇಳಿದ್ದೆ ಅದರಂತೆ ರೈಲು ದುರಂತ ನಡೆದಿದೆ ಎಂದು ಹೇಳಿದರು.

ಹಾಗೆಯೇ ಇನ್ನೂ ಒಂದು ಗಂಡಾಂತರ ದೇಶಕ್ಕೆ ಕಾದಿದೆ. ಈ ವರ್ಷ ಅಚಾನಕ್ಕಾಗಿ ಗುಡುಗು ಮಿಂಚು, ಬರಲಿದೆ. 2-3 ರಾಷ್ಟ್ರಗಳು ನೀರಿನಲ್ಲಿ ಮುಳುಗಡೆ ಯಾಗಲಿವೆ. ಎಲ್ಲೋ ನಡೆದ ಬಾಂಬ್‌ ದಾಳಿಯಿಂದ ಸಾಕಷ್ಟು ನಮಗೆ ಅನಾಹುತ ಸಂಭವಿಸಲಿದೆ ಎಂದು ಆಘಾತಕಾರಿ ಭವಿಷ್ಯ ನುಡಿದರು.

ರಾಜ್ಯದಲ್ಲಿ ಆಧ್ಯಾತ್ಮಿಕವಾಗಿ ಸಿದ್ದರಾಮಯ್ಯ ಸರ್ಕಾರ ನಡೆಯುತ್ತಿದೆ. ಹಾಗಾಗಿ ಅವರಿಗೆ ಒಳ್ಳೆಯದಾಗಲಿ, ಆಧ್ಯಾತ್ಮ ಬಿಟ್ಟು ಹೋದರೆ ಅವರಿಗೆ ದೈವವೇ ಉತ್ತರ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಬಗ್ಗೆ ಅಭಿಪ್ರಾಯ ತಿಳಿಸಿದರು.

Advertisement

ಗಿಡ, ಮರ, ದೈವದ, ಆರಾಧ್ಯದ ಸಂಕೇತ. ಮತ್ತೆ ಕೈವಾರ ತಾತಯ್ಯನವರು ಹುಟ್ಟಿ ಬರುವ ಸಂಕೇತ ಇದೆ. ಅಂತಹ ಸೂಚನೆ ಈಗಾಗಲೇ ಸಿಕ್ಕಿದೆ. ಅದರಂತೆ ಕೈವಾರ ಬೆಟ್ಟದಲ್ಲಿ ಮೂನ್ಸೂಚನೆ ಸಿಕ್ಕಿದೆ. ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ, ಕೋಡಿ ಮಠ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next