Advertisement
ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ ಕುಮಾರ್ ಶೆಟ್ಟಿ, ಆಡಳಿತಾಧಿಕಾರಿ ಶೋಭಲಕ್ಷ್ಮೀ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೃಷ್ಣದೇವ ಕಾರಂತ ಕೋಣಿ, ಸಮಿತಿ ಮಾಜಿ ಅಧ್ಯಕ್ಷರಾದ ಗೋಪಾಲಕೃಷ್ಣ ಶೆಟ್ಟಿ ಮಾರ್ಕೋಡು, ಪ್ರಭಾಕರ ಶೆಟ್ಟಿ ಸಂಕಲ್ಪದಲ್ಲಿ ಪಾಲ್ಗೊಂಡರು.
ವಾಡಿಕೆಯಂತೆ ರಥೋತ್ಸವ ಆರಂಭವಾಗುತ್ತಿದ್ದಂತೆ ಗರುಡವೊಂದು ರಥಕ್ಕೆ ಪ್ರದಕ್ಷಿಣೆ ಹಾಕಿತು. ವಿದೇಶಗಳಲ್ಲಿ ನೆಲೆಸಿರುವ ಭಕ್ತರ ಸಹಿತ 50 ಸಾವಿರಕ್ಕೂ ಮಿಕ್ಕಿ ಭಕ್ತರು ಆಗಮಿಸಿದ್ದರು. ದೇಗುಲದ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯರಾದ ಸುರೇಶ ಬೆಟ್ಟಿನ್, ಶಾರದಾ, ಚಂದ್ರಿಕಾಧನ್ಯ, ಗುರುರಾಜ ರಾವ್, ಮಂಜುನಾಥ ಆಚಾರ್ಯ, ಕೊಲ್ಲೂರು ದೇಗುಲದ ವ್ಯವಸ್ಥಾಪನ ಸಮಿತಿ ಸದಸ್ಯ ಸುರೇಂದ್ರ ಶೆಟ್ಟಿ, ಶ್ರೀ ಪಟ್ಟಾಭಿ ರಾಮಚಂದ್ರ ದೇಗುಲದ ಧರ್ಮದರ್ಶಿ ದಿನೇಶ ಕಾಮತ್, ಸುಧೀರ್ ಕುಮಾರ್ ಶೆಟ್ಟಿ ಮಾರ್ಕೋಡು, ದಿನೇಶ ಹೆಗ್ಡೆ ಮೊಳಹಳ್ಳಿ, ಅಶೋಕ ಪೂಜಾರಿ ಬೀಜಾಡಿ, ಮಲ್ಯಾಡಿ ಶಿವರಾಮ ಶೆಟ್ಟಿ, ಶಿಲ್ಪಿ ರಾಜಗೋಪಾಲ ಆಚಾರ್ಯ, ಕೋಟೇಶ್ವರ, ಬೀಜಾಡಿ, ಗೋಪಾಡಿ ಗ್ರಾ.ಪಂ. ಅಧ್ಯಕ್ಷರಾದ ರಾಗಿಣಿ ದೇವಾಡಿಗ, ಪ್ರಕಾಶ ಪೂಜಾರಿ, ಸುರೇಶ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಮಾಜಿ ಅಧ್ಯಕ್ಷ ಶ್ರೀನಿವಾಸ ರಾವ್ ಗೋಪಾಡಿ, ಎನ್. ರಾಘವೇಂದ್ರ ರಾವ್ ಉಪಸ್ಥಿತರಿದ್ದರು.