ಬೆಂಗಳೂರು: ಬಜೆಟ್ ಅಧಿವೇಶನದಲ್ಲಿ ಸಾರಿಗೆ ನೌಕರರಿಗೂ, ಆರನೇ ವೇತನ ಆಯೋಗ ಶಿಫಾರಸ್ಸು ಮಾಡಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರಕ್ಕೆ ಒತ್ತಾಯಿಸಿದರು.
ರಾಜ್ಯ ಸಾರಿಗೆ ನೌಕರರಿಗೆ ಸರ್ಕಾರ ನೀಡಿರುವ ಒಂಭತ್ತು ಭರವಸೆಗಳನ್ನು ಶೀಘ್ರ ಈಡೇರಿಸುವಂತೆ ಆಗ್ರಹಿಸಿ, ರಾಜ್ಯ ಸಾರಿಗೆ ನೌಕರರ ಕೂಟದಿಂದ ಹಮ್ಮಿಕೊಂಡಿರುವ ಬೃಹತ್ ಸತ್ಯಾಗ್ರಹ ಹಿನ್ನೆಲೆ ಸುದ್ದಿಗಾರರೊಂದಿಗೆ ಮಾತನಾಡಿದರು.
ಸಾರಿಗೆ ನೌಕರರ ಒಂಭತ್ತು ಬೇಡಿಕೆ ಈಡೇರಿಸುವಂತೆ ಹೋರಾಟ ಮಾಡಲಾಗುತ್ತಿದೆ. ಆದರೂ, ಸರ್ಕಾರ ನೌಕರ ಬೇಡಿಕೆ ಈಡೇರಿಸುವತ್ತ ಗಮನಹರಿಸುತ್ತಿಲ್ಲ. ಮಾರ್ಚ್ 15ರವರೆಗೆ ಸರ್ಕಾರಕ್ಕೆ ಗಡುವು ನೀಡಲಾಗುತ್ತದೆ. ನೌಕರರ ಬೇಡಿಕೆ ಈಡೇರಿಸದಿದ್ದರೆ, ತೀವ್ರ ಸ್ವರೂಪದ ಹೋರಾಟ ನಡೆಸಲಿದ್ದೇವೆ ಎಂದು ಸರ್ಕಾರಕ್ಕೆ ಎಚ್ಚರಿಸಿದರು.
ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ಜಾಮೀನು ಪಡೆದು ಹೊರಬಂದಾತ ಸಂತ್ರಸ್ತೆಯ ತಂದೆಯನ್ನು ಹತ್ಯೆಗೈದ !
ಇಂದು ಪ್ರತಿಭಟನೆ ಮಾಡಿ ಸರ್ಕಾರದ ಗಮನಕ್ಕೆ ತರುತ್ತಿದ್ದೇವೆ. ಐದು ಸಾವಿರ ಸಾರಿಗೆ ಸಿಬ್ಬಂದಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಒತ್ತಾಯಪೂರ್ವಕವಾಗಿ ಯಾರಿಗೂ, ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಹೇಳಿಲ್ಲ ಎಂದರು.
ಬಜೆಟ್ ಅಧಿವೇಶನದಲ್ಲಿ ಆರನೇ ವೇತನ ಆಯೋಗಕ್ಕೆ ಒಪ್ಪಿಗೆ ನೀಡಬೇಕು. ಅಲ್ಲದೆ, ಉಳಿದ ಎಂಟು ಬೇಡಿಕೆಗಳನ್ನು ಈಡೇರಿಸಲು ಮಾರ್ಚ್ 15ರವರೆಗೆ ಕಾಯಲಾಗುತ್ತದೆ. ಸರ್ಕಾರದ ನಿರ್ಧಾರ ಬಳಿಕ, ಮುಂದಿನ ಹೋರಾಟದ ಬಗ್ಗೆ ಚರ್ಚಿಸಲಾಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ: ಉಳ್ಳಾಲ: ಮಹಿಳೆಯ ಸರ ಎಳೆದು ಪರಾರಿ; ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು