Advertisement

ಸ್ವಾಮಿನಾಥನ್‌ ವರದಿ ಜಾರಿಗೆ ಕೋಡಿಹಳ್ಳಿ ಆಗ್ರಹ

06:35 AM Jun 28, 2018 | Team Udayavani |

ಬೆಂಗಳೂರು: ರಾಜ್ಯದ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡುವುದರೊಂದಿಗೆ ಸ್ವಾಮಿನಾಥನ್‌ ವರದಿ ಯನ್ವಯ ರೈತರು ಬೆಳೆದ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ
ಹಾಗೂ ಹಸಿರು ಸೇನೆ ಒತ್ತಾಯಿಸಿದೆ.

Advertisement

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌, ರೈತರ
ಕಷ್ಟಗಳನ್ನು ಪರಿಹರಿಸಲು ಸರ್ಕಾರ ಇಚ್ಛಿಸುವುದಾದರೆ ಅವರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು.

ಸ್ವಾಮಿನಾಥನ್‌ ವರದಿ ಅನ್ವಯ ಕನಿಷ್ಠ ಬೆಂಬಲ ಬೆಲೆ ನೀಡಬೇಕು. ಜತೆಗೆ ರಾಜ್ಯ ದಲ್ಲಿ ಸಿOಉàಶಕ್ತಿ ಸ್ವಸಹಾಯ ಸಂಘಗಳ ಗ್ರಾಮೀಣ ಮಹಿಳೆಯರ ಸಾಲ ಮನ್ನಾ ಮಾಡಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

ಸರ್ಕಾರ ಬಜೆಟ್‌ನಲ್ಲಿ ರೈತರ ಸಾಲ ಮನ್ನಾ ಮಾಡದಿದ್ದರೆ ಯಾವ ರೈತರೂ ಸಾಲ ತೀರಿಸುವುದು ಬೇಡ. ನಮ್ಮಿಂದ ಸಾಲ ಕಟ್ಟಲು ಸಾಧ್ಯವಿಲ್ಲ ಎಂದು ರೈತರು ಬ್ಯಾಂಕಿಗೆ ತಿಳಿಸಿಬಿಡಿ.
– ಕೋಡಿಹಳ್ಳಿ ಚಂದ್ರಶೇಖರ್‌

Advertisement

Udayavani is now on Telegram. Click here to join our channel and stay updated with the latest news.

Next