ಮಂಗಳೂರು: ಚುನಾವಣೆ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯಿಂದ ಗಡಿಪಾರಾಗಿದ್ದ ರೌಡಿಶೀಟರ್ ಕೋಡಿಕೆರೆ ಲೋಕೇಶ್ ನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
Advertisement
ಈತ ಗಡಿಪಾರು ಆದೇಶ ಉಲ್ಲಂಘಿಸಿ ಜಿಲ್ಲೆಗೆ ಪ್ರವೇಶಿಸಿದ್ದು ಆತನನ್ನು ಗುರುವಾರ ರಾತ್ರಿ ಬಂಟ್ವಾಳ ಪರಿಸರದಿಂದ ವಶಕ್ಕೆ ಪಡೆದುಕೊಳ್ಳಲಾಗಿದೆ. ಆತನನ್ನು ಕಲಬುರಗಿಗೆ ಗಡಿಪಾರು ಮಾಡಲು ಮಂಗಳೂರು ಪೊಲೀಸರು ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.