ಪುತ್ತೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಈಗಾಗಲೇ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಇನ್ನು ಹೆಸರು ಘೋಷಣೆಯಾಗಿಲ್ಲ. ಆದರೆ ಇದೀಗ ಪುತ್ತೂರು ಕ್ಷೇತ್ರದ ಟಿಕೆಟ್ ಹಂಚಿಕೆ ಫೈನಲ್ ಆಗಿದೆ ಎಂದು ವರದಿಯಾಗಿದೆ.
ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಹೆಸರು ಅಧಿಕೃತವಾಗಿದೆ ಎಂದು ವರದಿಯಾಗಿದೆ. ಈ ಬಗ್ಗೆ ಪಕ್ಷದ ಮೂಲಗಳು ಉದಯವಾಣಿಗೆ ಖಚಿತಪಡಿಸಿವೆ.
ಕಾಂಗ್ರೆಸ್ ನಿಂದ ಹಲವಾರು ಮಂದಿ ಟಿಕೆಟ್ ಆಕಾಂಕ್ಷಿಗಳಿದ್ದರು. ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕಾವು ಹೇಮನಾಥ ಶೆಟ್ಟಿ ಕೂಡಾ ಆಕಾಂಕ್ಷಿಗಳಾಗಿದ್ದರು.
ಇದನ್ನೂ ಓದಿ:Bhavani revanna ಹಾಸನದಲ್ಲಿ ಗೆಲ್ಲುವುದಿಲ್ಲ, ನನಗೆ ತೊಂದರೆ ಕೊಡುವುದು ಬೇಡ: ಕುಮಾರಸ್ವಾಮಿ
Related Articles
ಅಶೋಕ್ ಕುಮಾರ್ ರೈ ಅವರು ಈ ಹಿಂದೆ ಎರಡು ಬಾರಿ ಬಿಜೆಪಿಯಿಂದ ಟಿಕೆಟ್ ಗೆ ಪ್ರಯತ್ನಿಸಿದ್ದರು. ಇತ್ತೀಚಿನ ದಿನಗಳಲ್ಲಿ ಅವರು ಬಿಜೆಪಿ ತೊರೆದು ಕೈ ಪಾಳಯ ಸೇರಿದ್ದರು.
ಬಿಜೆಪಿ ಇದುವರೆಗೆ ಟಿಕೆಟ್ ಅಂತಿಮಗೊಳಿಸಿಲ್ಲ. ಎಸ್ ಡಿಪಿಐಯಿಂದ ಶಾಫಿ ಬೆಳ್ಳಾರೆ ಮತ್ತು ಆಮ್ ಆದ್ಮಿಯಿಂದ ಡಾ ವಿಶುಕುಮಾರ್ ಸ್ಪರ್ಧೆ ಮಾಡುತ್ತಿದ್ದಾರೆ.