Advertisement

ಗಿಡ-ಮರ ಪೋಷಣೆ ಪ್ರತಿಯೊಬ್ಬರ ನಿತ್ಯ ಕಾಯಕವಾಗಲಿ

05:18 PM Jun 10, 2019 | Team Udayavani |

ಕೂಡ್ಲಿಗಿ: ಪರಿಸರ ದಿನಾಚರಣೆ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗದೇ ಮರ, ಗಿಡಗಳಿಗೆ ನೀರು ಹಾಕಿ ಪೋಷಿಸುವ ಕಾರ್ಯ ನಿತ್ಯ ನಿರಂತರವಾಗಿರಬೇಕು ಎಂದು ನಿವೃತ್ತ ಮುಖ್ಯಗುರು ಸಿ.ಬಿ.ತಿಪ್ಪೆಸ್ವಾಮಿ ಹೇಳಿದರು.

Advertisement

ಚಿಕ್ಕಜೋಗಿಹಳ್ಳಿಯ ಸರಕಾರಿ ಬಾಲಕರ ಪ್ರೌಢಶಾಲೆ ಆವರಣದಲ್ಲಿ ಪರಿಸರ ದಿನಾಚರಣೆ ನಿಮಿತ್ತ ಸಸಿ ನೆಟ್ಟು ಅವರು ಮಾತನಾಡಿದರು. ಪರಿಸರ ಸಮತೋಲನ ಕಾಪಾಡಲು ಹೆಚ್ಚು ಸಸಿಗಳನ್ನು ನೆಡಬೇಕು. ಅವುಗಳನ್ನು ಪಾಲನೆ, ಪೋಷಣೆ ಮಾಡಿ ಗಿಡಗಳಾದ ಮೇಲೆ ಸಂರಕ್ಷಣೆ ಮಾಡಬೇಕು. ವಾತಾವರಣದಲ್ಲಿ ತಾಪಮಾನ ಪ್ರಮಾಣ ಕಡಿಮೆ ಆಗುತ್ತ್ತಿದೆ. ಆದ್ದರಿಂದ ಪ್ರತಿಯೊಬ್ಬರು ಸಸಿಗಳನ್ನು ನೆಟ್ಟು ಬೆಳೆಸಬೇಕಾಗಿದೆ. ಇಂಥ ಕಾರ್ಯಕ್ರಮಗಳು ಶಾಲೆಯಲ್ಲಿ ನಡೆಯುವುದರಿಂದ ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿ ಮೂಡಿಸಲು ಸಾಧ್ಯವಾಗುತ್ತದೆ ಎಂದರು.

ಪರಿಸರ ವಿಷಯ ಕುರಿತು ಶಾಲೆ ಮುಖ್ಯಗುರು ಪಿ.ಶೆಖರಪ್ಪ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿ ಪರಿಸರದ ಅಗತ್ಯತೆ, ಕಾಳಜಿ, ಅರಿವನ್ನು ಹೊಂದಿರುವುದರ ಜೊತೆಗೆ ಪರಿಸರಕ್ಕೆ ತಾನು ನೀಡುತ್ತಿರುವ ಕೊಡುಗೆಯಾದರೂ ಏನು ಎಂಬುದನ್ನು ಮನವರಿಕೆ ಮಾಡಿಕೊಂಡು ಅದರ ಉಳಿವಿಗಾಗಿ ಜಾಗೃತರಾಗಬೇಕು. ನಮಗಿರುವ ಒಂದೇ ಒಂದು ಭೂಮಿ ಉಳಿಸಿಕೊಳ್ಳಲು ಹಿಂದೆಂದೂ ಇಲ್ಲದ ಕಾಳಜಿ ಈಗ ಬಾಯಲ್ಲಿ ಮಾತ್ರ ಪಠಣ ಮಾಡಿದರೆ ಸಾಲದು. ಇನ್ನಾದರೂ ಮನುಷ್ಯ ಜಾಗೃತನಾಗಿ ಪರಿಸರ ಸಂರಕ್ಷಣೆಗಾಗಿ ಕ್ರಮಗಳನ್ನು ಕೈಗೊಂಡು ಹಸಿರು ಕ್ರಾಂತಿ ಮಾಡಬೇಕಿದೆ ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಭರತೇಶಕುಮಾರ, ಮುತ್ತುರಾಜ್‌, ವಿಶ್ವನಾಥ, ಗೋಪಲಾನಾಯ್ಕ, ಅಂಬಿಕ, ಬಸವರಾಜ್‌,ಬಿರಯ್ಯ, ಹನುಮೇಶ, ಜಗನ್ನಾಥ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next