ಬೆಂಗಳೂರು:ಬಿಜೆಪಿಗೆ ದಲಿತರ ಮೇಲೆ ಗೌರವ ಇದ್ದರೆ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ದಲಿತರನ್ನು ನೇಮಿಸಲಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸವಾಲು ಹಾಕಿದ್ದಾರೆ.
ಕಾಂಗ್ರೆಸ್‌ನಲ್ಲಿ ದಲಿತರಿಗೆ ಗೇಟ್ ಪಾಸ್ ನೀಡುತ್ತಿದ್ದಾರೆ ಎಂನಬ ಆರ್. ಅಶೋಕ್ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಕೆಪಿಸಿಸಿ ಅಧ್ಯಕ್ಷರಾಗಿ ದಲಿತ ಸಮುದಾಯಕ್ಕೆ ಸೇರಿದ ಪರಮೇಶ್ವರ್ ಏಳು ವರ್ಷಗಳಿಂದ ಕೆಲಸ ಮಾಡುತ್ತಿದ್ದಾಎರ. ಅಶೋಕ್ ಅವರಿಗೆ ಯಾಕೆ ನಮ್ಮ ಪಕ್ಷದ ಬಗ್ಗೆ ಚಿಂತೆ ಎಂದು ಪ್ರಶ್ನಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಆವರು, ಕಾಂಗ್ರೆಸ್‌ನಲ್ಲಿ ಈ ಹಿಂದೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಪರಮೇಶ್ವರ್ ಅವರನ್ನು ಅಧ್ಯಕ್ಷರನ್ನಾಗಿ ಮುಂದುರೆಸುವ ಕುರಿತು ಕಾಂಗ್ರೆಸ್ ಹೈ ಕಮಾಂಡ್ ತೀರ್ಮಾನ ಮಾಡುತ್ತದೆ. ಅಶೋಕ್ ಅವರ ಹೇಳಿಕೆ ರಾಜಕೀಯ ಪ್ರೇರಿತವಾಗಿದ್ದು,ಉಪ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಆ ರೀತಿಯ ಹೇಳಿಕೆ ನೀಡಿದ್ದಾರೆ. ಎರಡೂ ಕ್ಷೇತ್ರಗಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜೆಡಿಎಸ್ ಬೆಂಬಲ ನೀಡುತ್ತಿದೆ ಎಂದು ಹೇಳಿದರು.
ಮುಂದಿನ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪಕ್ಷ ಸ್ವಂತ ಬಲದಿಂದ ಅಧಿಕಾರಕ್ಕೆ ಬರಲಿದೆ. ನಮ್ಮ ಸರ್ಕಾರ ಮಾಡಿರುವ ಅಭಿವೃದ್ಧಿ ಕಾರ್ಯಗಳೆ ನಮಗೆ ಶ್ರೀರಕ್ಷೆಯಾಗಲಿವೆ. ಜನರು ನಮ್ಮ ಅಭಿವೃದ್ಧಿ ಕೆಲಸಮಗಳನ್ನು ನೋಡಿ ಮತ ನೀಡುವ ವಿಶ್ವಾಸ ಇದೆ. ನಮ್ಮ ಸರ್ಕಾರ ಪ್ರಣಾಳಿಕೆಯಲ್ಲಿನ 150 ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸಿದೆ. ಬಿಜೆಪಿಯವರು ಭ್ರಷ್ಟಾಚಾರದ ಆರೋಪದ ಮೇಲೆ ಜೈಲಿಗೆ ಹೋಗಿದ್ದು ಜನ ಇನ್ನೂ ಮರೆತಿಲ್ಲ. ಹೀಗಾಗಿ ಅವರ ಮಿಷನ್ 150 ವಕೌìಟ್ ಆಗಲ್ಲ ಎಂದು ಹೇಳಿದರು.