ಮೆಲ್ಬರ್ನ್: ಐಸಿಸಿ ಟಿ20 ವಿಶ್ವಕಪ್ ಸೂಪರ್ 12 ಹಂತದ ಮೊದಲ ಪಂದ್ಯದಲ್ಲೇ ವಿರಾಟ್ ಕೊಹ್ಲಿ ಅಬ್ಬರಿಸಿದ್ದಾರೆ. ಸಾಂಪ್ರಾಯಿಕ ಎದುರಾಳಿ ಪಾಕಿಸ್ಥಾನ ವಿರುದ್ಧ ನಡೆದ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ ವಿರಾಟ್, ಭಾರತ ತಂಡಕ್ಕೆ ವೀರೋಚಿತ ಜಯ ತಂದಿತ್ತರು. ಇದೇ ವೇಳೆ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಭಾನುವಾರ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ.
ಐಕಾನಿಕ್ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ (ಎಂಸಿಜಿ) ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ವಿರಾಟ್ ಈ ದಾಖಲೆಯನ್ನು ಬರೆದಿದ್ದಾರೆ. 53 ಎಸೆತಗಳನ್ನು ಎದುರಿಸಿದ ಅವರು ಆರು ಬೌಂಡರಿ ಮತ್ತು ನಾಲ್ಕು ಸಿಕ್ಸರ್ ಗಳೊಂದಿಗೆ ಅಜೇಯ 82 ರನ್ ಗಳಿಸಿದರು. ಟಿ20 ಕ್ರಿಕೆಟ್ ಇತಿಹಾಸದ ಅತ್ಯಂತ ಸುಂದರ ಇನ್ನಿಂಗ್ ಆಡಿದ ವಿರಾಟ್ ಇದೇ ವೇಳೆ ರೋಹಿತ್ ಶರ್ಮಾ ದಾಖಲೆ ಮುರಿದರು.
ಇದನ್ನೂ ಓದಿ:ಶಿಂಧೆ ಬಣದಲ್ಲೇ ಬಿರುಕು; ಶೀಘ್ರದಲ್ಲೆ ಬಿಜೆಪಿ ಸೇರಲಿದ್ದಾರೆ 22 ಶಾಸಕರು: ಏನಿದು ವರದಿ?
ಈ ಪಂದ್ಯಕ್ಕೂ ಮೊದಲು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ನಾಯಕ ರೋಹಿತ್ ಶರ್ಮಾ ಮೊದಲ ಸ್ಥಾನದಲ್ಲಿದ್ದರು. ಅಜೇಯ 82 ರನ್ ಗಳಿಸಿದ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತ್ಯಧಿಕ 3,794 ರನ್ ಬಾರಿಸಿದರು. ರೋಹಿತ್ ಶರ್ಮ ಅವರ 3,741 ರನ್ ದಾಖಲೆಯನ್ನು ಹಿಂದಿಕ್ಕಿದರು.
ಇದೇ ವೇಳೆ ವಿರಾಟ್ ಕೊಹ್ಲಿ ಅತ್ಯಧಿಕ 14 ಸಲ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಅಫ್ಘಾನಿಸ್ಥಾನದ ನಾಯಕ ಮೊಹಮ್ಮದ್ ನಬಿ ದ್ವಿತೀಯ ಸ್ಥಾನಕ್ಕೆ ಇಳಿದರು.
ಕೊಹ್ಲಿ ಇದೀಗ ಟಿ20 ವಿಶ್ವಕಪ್ ಇತಿಹಾಸದಲ್ಲಿ 900 ರನ್ ಗಡಿ ದಾಟಿದ 3ನೇ ಆಟಗಾರ ಎನಿಸಿಕೊಂಡಿದ್ದಾರೆ. ಶ್ರೀಲಂಕಾದ ಮಾಜಿ ನಾಯಕ ಮಹೇಲಾ ಜಯವರ್ಧನೆ (1,016) ಮತ್ತು ಕ್ರಿಸ್ ಗೇಲ್ (965) ಸದ್ಯಕ್ಕೆ ಕೊಹ್ಲಿಗಿಂತ ಮೇಲಿದ್ದಾರೆ.