ಹೊಸದಿಲ್ಲಿ : ನ್ಯೂಜೀಲ್ಯಾಂಡ್ ವಿರುದ್ಧದ 5 ಪಂದ್ಯಗಳ ಹಾಲಿ ಏಕದಿನ ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ಮತ್ತು ಮೂರು ಪಂದ್ಯಗಳ ಟಿ-20 ಸರಣಿಗೆ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದೆ.
ವಿರಾಟ್ ಕೊಹ್ಲಿ ಅವರು ಆಸೀಸ್ ವಿರುದ್ಧ ದ್ವಿಪಕ್ಷೀಯ ಟೆಸ್ಟ್ ಮತ್ತು ಏಕದಿನ ಸರಣಿಯನ್ನು ಗೆದ್ದು ಐತಿಹಾಸಿಕ ಸಾಧನೆ ಮಾಡುವಲ್ಲಿ ತಾಳಿಕೊಂಡಿದ್ದ ಕಾರ್ಯ ಒತ್ತಡವನ್ನು ಮತು ಆಸ್ಟ್ರೇಲಿಯ ತಂಡದ ಭಾರತ ಸರಣಿಯನ್ನು ದೃಷ್ಟಿಯಲ್ಲಿರಿಸಿಕೊಂಡು ಕೊಹ್ಲಿಗೆ ವಿಶ್ರಾಂತಿ ನೀಡಲು ನಿರ್ಧರಿಸಲಾಯಿತೆಂದು ಮೂಲಗಳು ತಿಳಿಸಿವೆ.
ಇದೇ ವೇಳೆ ಆತಿಥೇಯ ನ್ಯೂಜಿಲ್ಯಾಂಡ್ ವಿರುದ್ಧ ಇಂದು ನೇಪಿಯರ್‌ನಲ್ಲಿ ನಡೆದಿದ್ದ ಮೊದಲ ಏಕದಿನ ಪಂದ್ಯವನ್ನು ಭಾರತ ಭರ್ಜರಿಯಾಗಿ 8 ವಿಕೆಟ್‌ಗಳ ಅಂತರದಲ್ಲಿ ಜಯಿಸುವಲ್ಲಿ ಕೊಹ್ಲಿ ಉತ್ತಮ ಬ್ಯಾಟಿಂಗ್ ಮೂಲಕ ಕೊಟ್ಟಿರುವ ತನ್ನ ಕೊಡುಗೆಯೂ ಗಮನಾರ್ಹವಾಗಿದೆ.