Advertisement

ಸರಣಿ ಸೋತರೂ, ಹೊಸ ದಾಖಲೆ ಬರೆದ ನಾಯಕ ವಿರಾಟ್ ಕೊಹ್ಲಿ !

07:31 PM Nov 29, 2020 | Adarsha |

ನವದೆಹಲಿ: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ಅತೀ ವೇಗವಾಗಿ 22,000 ರನ್ ಪೂರೈಸುವ ಮೂಲಕ ಹೊಸದೊಂದು ದಾಖಲೆ ಬರೆದಿದ್ದಾರೆ.

Advertisement

ಭಾನುವಾರ ನಡೆದ ಭಾರತ-ಆಸ್ಟೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯಾಟದಲ್ಲಿ, 89 ರನ್ ಸಿಡಿಸಿದ ನಾಯಕ ಕೊಹ್ಲಿ, ಆ ಮೂಲಕ  ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ 22,000 ಸಾವಿರ ರನ್ ಪೂರೈಸಿದ ಸಾಧನೆ ಮಾಡಿದರು.  ಈ ಸಾಧನೆ ಮಾಡಿದ ವಿಶ್ವದ 8ನೇ ಹಾಗೂ 3ನೇ ಭಾರತೀಯ ಆಟಗಾರ ಎಂಬ ಕೀರ್ತಿಗೂ  ಭಾಜನರಾಗಿದ್ದಾರೆ.

ಇದನ್ನೂ ಓದಿ: ಭಾರತೀಯ ಯುವಕನಿಂದ ಲವ್ ಪ್ರಪೋಸ್; ಒಪ್ಪಿಗೆ ನೀಡಿದಳಾ ಆಸೀಸ್ ಯುವತಿ ? ವಿಡಿಯೋ ವೈರಲ್

ಕೊಹ್ಲಿ ಒಟ್ಟು 418 ಪಂದ್ಯಗಳಲ್ಲಿ 22,011 ರನ್ ಗಳನ್ನು ಬಾರಿಸಿದ್ದಾರೆ. ಈ ಮೊದಲು ಸಚಿನ್ ತೆಂಡೂಲ್ಕರ್ ಮತ್ತು ರಾಹುಲ್ ದ್ರಾವಿಡ್ ಈ ಸಾಧನೆ ಮಾಡಿದ್ದರು.

ಸಚಿನ್ ತೆಂಡೂಲ್ಕರ್ ಒಟ್ಟು 664 ಪಂದ್ಯಗಳಲ್ಲಿ 34,357 ರನ್ ಗಳಿಸುವ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ. ರಾಹುಲ್ ದ್ರಾವಿಡ್ ಒಟ್ಟು 509 ಪಂದ್ಯಗಳಲ್ಲಿ 24,208 ರನ್ ಗಳನ್ನು ಬಾರಿಸಿ ಈ ಸಾಧನೆಗೈದಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next