Advertisement
ಬೆಳ್ತಂಗಡಿ ತಾಲೂಕಿನ ಪಟ್ರಮೆ ನಿವಾಸಿ ಕೃಷ್ಣಪ್ಪ ಯಾನೆ ಕಿಟ್ಟ (58) ಅವರಿಗೆ ಕುಮಾರ್ ಹಲ್ಲೆ ನಡೆಸಿದ್ದರಿಂದ ಬಿದ್ದು ಮೃತಪಟ್ಟಿದ್ದರು. ಘಟನೆ ಕುರಿತಂತೆ ಕೃಷ್ಣಪ್ಪ ಅವರ ಪತ್ನಿ ಭಾರತಿ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಧರ್ಮಸ್ಥಳ ಠಾಣೆಯಲ್ಲಿ ಕುಮಾರ್ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಮೇ 14ರಂದು ಅವರನ್ನು ಬಂಧಿಸಲಾಗಿದೆ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ, ಇದೀಗ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Advertisement
Kokkada:ಹಲ್ಲೆಯಿಂದ ವ್ಯಕ್ತಿ ಮೃತಪಟ್ಟ ಪ್ರಕರಣ:ಪಶು ವೈದ್ಯಕೀಯ ಪರೀಕ್ಷಕನಿಗೆ ನ್ಯಾಯಾಂಗ ಬಂಧನ
07:52 PM May 15, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.