Advertisement

Kokkada:ಹಲ್ಲೆಯಿಂದ ವ್ಯಕ್ತಿ ಮೃತಪಟ್ಟ ಪ್ರಕರಣ:ಪಶು ವೈದ್ಯಕೀಯ ಪರೀಕ್ಷಕನಿಗೆ ನ್ಯಾಯಾಂಗ ಬಂಧನ

07:52 PM May 15, 2024 | Team Udayavani |

ಕೊಕ್ಕಡ: ಕೊಕ್ಕಡ ವೃತ್ತದಲ್ಲಿ ಮೇ 13ರಂದು ಸಂಜೆ ನಡೆದ ಹಲ್ಲೆ ಪ್ರಕರಣದಲ್ಲಿ ವ್ಯಕ್ತಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಸಿನಮಕ್ಕಿ ಪಶು ಚಿಕಿತ್ಸಾ ಕೇಂದ್ರದ ಹಿರಿಯ ಪಶು ವೈದ್ಯಕೀಯ ಪರೀಕ್ಷಕ ಕುಮಾರ್‌ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Advertisement

ಬೆಳ್ತಂಗಡಿ ತಾಲೂಕಿನ ಪಟ್ರಮೆ ನಿವಾಸಿ ಕೃಷ್ಣಪ್ಪ ಯಾನೆ ಕಿಟ್ಟ (58) ಅವರಿಗೆ ಕುಮಾರ್‌ ಹಲ್ಲೆ ನಡೆಸಿದ್ದರಿಂದ ಬಿದ್ದು ಮೃತಪಟ್ಟಿದ್ದರು. ಘಟನೆ ಕುರಿತಂತೆ ಕೃಷ್ಣಪ್ಪ ಅವರ ಪತ್ನಿ ಭಾರತಿ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಧರ್ಮಸ್ಥಳ ಠಾಣೆಯಲ್ಲಿ ಕುಮಾರ್‌ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಮೇ 14ರಂದು ಅವರನ್ನು ಬಂಧಿಸಲಾಗಿದೆ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ, ಇದೀಗ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕ ವಸಂತ ಆರ್‌. ಆಚಾರ್‌ ಮತ್ತು ತಂಡ ಪ್ರಕರಣದ ತನಿಖೆ ನಡೆಸುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next