Advertisement

Kokkada: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಗೆ ಪಶು ವೈದ್ಯಾಧಿಕಾರಿಯಿಂದ ಹಲ್ಲೆ, ಸಾವು?

12:32 AM May 14, 2024 | Team Udayavani |

ಬೆಳ್ತಂಗಡಿ: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಆಸ್ಪತ್ರೆಯಿಂದ ಮರಳುತ್ತಿದ್ದಂತೆ ಆತನನ್ನು ಕಂಡು ಪರಿಚಿತ ಪಶು ವೈದ್ಯಾಧಿಕಾರಿಯೊಬ್ಬರು ಹಲ್ಲೆ ನಡೆಸಿದ್ದು, ಇದೇ ವೇಳೆ ವ್ಯಕ್ತಿ ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಜೋಡುಮಾರ್ಗ ಸರ್ಕಲ್‌ನಲ್ಲಿ ಸೋಮವಾರ ಸಂಜೆ ನಡೆದಿದೆ.

Advertisement

ಪಟ್ರಮೆ ಗ್ರಾಮದ ಕೃಷ್ಣ ಯಾನೆ ಕಿಟ್ಟ (58) ಮೃತರು.ಕೃಷ್ಣ ಅವರು ವಿಪರೀತ ಜ್ವರ ಇದ್ದ ಕಾರಣ ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯದಲ್ಲಿ ಚೇತರಿಕೆ ಕಂಡ ಕಾರಣ ಸೋಮವಾರ ಕೊಕ್ಕಡಕ್ಕೆ ಬಂದಿಳಿದಿದ್ದಾರೆ. ಇದೇ ವೇಳೆ ತನ್ನ ಪರಿಚಿತರೇ ಆದ ಕೊಕ್ಕಡದ ಪಶು ವೈದ್ಯ ಡಾ| ಕುಮಾರ್‌ಅವರು ಕೃಷ್ಣ ಅವರಲ್ಲಿ ಮಾತನಾಡುತ್ತ ಜ್ವರ ಇದ್ದು ಇಷ್ಟು ಬೇಗ ಡಿಸಾcರ್ಜ್‌ ಆಗಿ ಯಾಕೆ ಬಂದೆ, ಆರೋಗ್ಯ ಸುಧಾರಿಸಿ ಬರಬೇಕಿತ್ತು ಎಂದು ಬುದ್ದಿ ಮಾತು ಹೇಳಿ ಒಂದು ಏಟು ಹೊಡೆದಿದ್ದಾರೆ ಎನ್ನಲಾಗಿದೆ.

ಪಶು ವೈದ್ಯರು ಹೊಡೆದ ರಭಸಕ್ಕೆ ಕೃಷ್ಣ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಸ್ವಲ್ಪ ಹೊತ್ತಿನಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ.

ವೈದ್ಯರು ಹೊಡೆದ ಕಾರಣಕ್ಕೋ ಅಥವಾ ಜ್ವರದಿಂದ ಬಳಲಿ ಕೃಷ್ಣ ಅವರು ಸಾವನ್ನಪ್ಪಿದ್ದಾರೆಯೇ ಅಥವಾ ಇನ್ನಾವುದೋ ಆರೋಗ್ಯ ಸಮಸ್ಯೆಯಿಂದ ಸಾವನ್ನಪ್ಪಿದ್ದಾರೆಯೇ ಎಂಬುದು ತಿಳಿದುಬಂದಿಲ್ಲ.

ಸ್ಥಳಕ್ಕೆ ಧರ್ಮಸ್ಥಳ ಠಾಣಾಧಿಕಾರಿ ಸಮರ್ಥ್ ಮತ್ತು ಅವರ ತಂಡ ಆಗಮಿಸಿ ತನಿಖೆ ನಡೆಸಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆ ಆಸ್ಪತ್ರೆಗೆ ರವಾನಿಸಲಾಗಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next