Advertisement

Kokkada: ಅನಾರೋಗ್ಯದಿಂದ ಯುವತಿ ಮೃತ್ಯು

09:42 PM Jul 09, 2024 | Team Udayavani |

ಕೊಕ್ಕಡ: ಶಿಶಿಲ ಗ್ರಾಮದ ಪೇರಿಕೆ ನಿವಾಸಿ ಸುಪ್ರೀತಾ (16) ಅನಾರೋಗ್ಯದಿಂದ ಮಂಗಳವಾರ ಮಧ್ಯಾಹ್ನ ಮೃತಪಟ್ಟ ಘಟನೆ ನಡೆದಿದೆ.

Advertisement

ಪೇರಿಕೆಯ ಕೃಷ್ಣಪ್ಪ ಮಲೆಕುಡಿಯ ಮತ್ತು ಸುನಂದಾ ದಂಪತಿಯ ಪುತ್ರಿಯಾಗಿರುವ ಸುಪ್ರಿತಾ ಕಳೆದೆರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆದಿದ್ದರು  ಎನ್ನಲಾಗಿದೆ.

ಮಂಗಳವಾರ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿದ್ದು ತಕ್ಷಣ ಅವರನ್ನು ಉಪ್ಪಿನಂಗಡಿ ಆಸ್ಪತ್ರೆಗೆ ಕರೆದೊಯ್ದು ಔಷಧ ಕೊಡಿಸಿದ್ದರು. ಆದರೆ ಬಳಿಕ ಮನೆಗೆ ಹಿಂದಿರುಗವ ವೇಳೆ ಪ್ರಜ್ಞೆ ತಪ್ಪಿದ್ದರು. ಬಳಿಕ ವೈದ್ಯರ ಬಳಿಗೆ ಕರೆದೊಯ್ದಾಗ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಮೃತ ಸುಪ್ರೀತಾ ತಂದೆ, ತಾಯಿ, ತಮ್ಮನನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next