Advertisement
‘ಜೈ ಭಾರತ್’ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು,ಅದಾನಿ ಭ್ರಷ್ಟಾಚಾರ ವಿಷಯವನ್ನು ಪ್ರಸ್ತಾಪಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ತೀವ್ರ ವಾಗ್ದಾಳಿ ನಡೆಸಿದರು. ಅದಾನಿ ಭ್ರಷ್ಟಾಚಾರದ ಸಂಕೇತವಾಗಿದೆ ಎಂದರು.
Related Articles
Advertisement
‘ದೇಶದಲ್ಲೇ ಮೊದಲು ವಿದ್ಯುತ್ ಬಂದಿದ್ದು ಕೋಲಾರಕ್ಕೆ. ಬಂಗಾರದ ಗಣಿ ಇದ್ದಿದ್ದು ಕೋಲಾರದಲ್ಲಿ. ನೆಹರು ಅವರ ಕಾಲದಲ್ಲಿ ಕೆ.ಸಿ ರೆಡ್ಡಿಯವರ ಕಾಲದಲ್ಲಿ ರಾಜ್ಯದಲ್ಲಿ ಹಲವಾರು ಕೈಗಾರಿಕೆಗಳು ಸ್ಥಾಪನೆಯಾದವು. ನಿಮ್ಮ ಕಾಲದಲ್ಲಿ ರಾಜ್ಯಕ್ಕೆ ಯಾವ ಕಾರ್ಖಾನೆ ಬಂದಿದೆ ಹೇಳಿ ಮೋದಿಯವರೇ’ ಎಂದು ಪ್ರಶ್ನಿಸಿದರು.
ಕರ್ನಾಟಕ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ ಹಿರಿಯ ನಾಯಕರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.
2019 ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯವರಿಗೆ ಗುಜರಾತ್‌ನ ಸೂರತ್‌ನ ನ್ಯಾಯಾಲಯವು ಮಾರ್ಚ್ 23 ರಂದು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ಒಂದು ದಿನದ ನಂತರ, ಪ್ರಕರಣದಲ್ಲಿ ಶಿಕ್ಷೆಯಾದ ದಿನಾಂಕದಿಂದ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಯಿತು. 2019ರ ಎಪ್ರಿಲ್‌ನಲ್ಲಿ ಕೋಲಾರದಲ್ಲಿ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮೋದಿ ಉಪನಾಮದ ಬಗ್ಗೆ ಗಾಂಧಿ ಹೇಳಿಕೆ ನೀಡಿದ್ದರು. ಸಂಸತ್ ಸದಸ್ಯತ್ವವನ್ನು ಕಳೆದುಕೊಂಡಿದ್ದಾರೆ.