Advertisement

ಕೋಲಾರ : ಭೀಕರ ಅಪಘಾತದಲ್ಲಿ ಮೂವರು ಯುವಕರ ದುರ್ಮರಣ 

11:10 AM Aug 04, 2017 | Team Udayavani |

ಕೋಲಾರ: ರಾಷ್ಟ್ರೀಯ ಹೆದ್ದಾರಿ 75 ರ ಮಡೇರಹಳ್ಳಿ ಬಳಿ ಗುರುವಾರ ತಡರಾತ್ರಿ ಕಾರ್‌ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ  ಮೂವರು ದಾರುಣವಾಗಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. 

Advertisement

ಬೆಂಗಳೂರಿನಿಂದ ಕೋಲಾರಕ್ಕೆ ಬರುತ್ತಿದ್ದ  ಐ 20 ಕಾರು ಬಸ್‌ಗೆ ಮುಖಾಮುಖೀ ಯಾಗಿ ಡಿಕ್ಕಿಯಾಗಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಶ್ರೀಹರಿ (23),ರೋಹನ್‌(22)ಸುಭಾಷ್‌ (21)ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಇನ್ನಿಬ್ಬರಾದ ಕಾರ್ತಿಕ್‌(24)ಮತ್ತು ಬಿಶ್ವಾಸ್‌ (25) ಸ್ಥಿತಿ ಚಿಂತಾಜನಕವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತ ದುರ್ದೈವಿಗಳು ಬರ್ತ್‌ಡೇ ಪಾರ್ಟಿ ಮುಗಿಸಿ ಮನೆಗಳಿಗೆ ವಾಪಾಸಾಗುತ್ತಿದ್ದರು ಎಂದು ವರದಿಯಾಗಿದೆ. 

ಕೋಲಾರ ಗ್ರಾಮಂತರ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next