Advertisement
ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಂ. ಶ್ರೀನಿವಾಸ್ (62) ಹಲ್ಲೆಯಿಂದ ಸಾವನ್ನಪ್ಪಿದವರು.
Related Articles
Advertisement
ತೀವ್ರ ಗಾಯಗೊಂಡು ಕುಸಿದುಬಿದ್ದ ಸೀನಪ್ಪ ಅವರನ್ನು ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ನಂತರ ಕೋಲಾರದ ಜಾಲಪ್ಪ ಆಸ್ಪತ್ರೆಗೆ ಕರೆ ತಂದಿದ್ದಾರೆ. ಅಲ್ಲಿ ಅವರ ಸಾವನ್ನು ದೃಢಪಡಿಸಲಾಗಿದೆ.
ಸೀನಪ್ಪ ಅವರು ಐದು ವರ್ಷದ ಹಿಂದೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು.
ಶ್ರೀನಿವಾಸಪುರ ಕ್ಷೇತ್ರದಲ್ಲಿ ರಾಜಕೀಯ ದ್ವೇಷಕ್ಕೆ ಹಲವಾರು ಮಂದಿ ಬಲಿಯಾಗಿದ್ದು, ಸೀನಪ್ಪ ಅವರ ಕೊಲೆಯು ರಾಜಕೀಯ ದ್ವೇಷದಿಂದಲೇ ಸಂಭವಿಸಿರಬೇಕೆಂದು ಶಂಕಿಸಲಾಗಿದೆ.
ಶ್ರೀನಿವಾಸಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ತನಿಖೆ ಕೈಗೊಂಡಿದ್ದಾರೆ.
ಮಾಜಿ ಸ್ಪೀಕರ್ ರಮೇಶ್ ಕುಮಾರ್ ತಮ್ಮ ಬೆಂಬಲಿಗ ಮುಖಂಡರ ಹತ್ಯೆಯಿಂದ ತೀವ್ರ ಆಘಾತಗೊಂಡಿದ್ದು ಆಸ್ಪತ್ರೆಗೆ ಧಾವಿಸಿ ಬಂದಿದ್ದರು.
ಘಟನೆ ನಂತರ ಕೃತ್ಯದಲ್ಲಿ ಪಾಲ್ಗೊಂಡಿದ್ದ ಆರು ಮಂದಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.