Advertisement

ಗ್ರಾಮಗಳ ವಾಸ್ತವ ಅರಿತ ಜಿಲ್ಲಾಧಿಕಾರಿಗಳು

03:46 PM Feb 21, 2021 | Team Udayavani |

ಕೋಲಾರ: ಜನರ ಸಮಸ್ಯೆಗಳನ್ನು ಅವರ ಗ್ರಾಮಗಳ ಲ್ಲಿಯೇ ಆಲಿಸಿ ಶೀಘ್ರದಲ್ಲಿ ಪರಿಹರಿಸಲು ಹಾಗೂ ಜನರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಗ್ರಾಮ ವಾಸ್ತವ್ಯ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಧಿಕಾರಿ ಡಾ. ಆರ್‌. ಸೆಲ್ವಮಣಿ ತಿಳಿಸಿದರು.

Advertisement

ತಾಲೂಕಿನ ಕೆಂಬೋಡಿ ಗ್ರಾಮದಲ್ಲಿ ಶನಿವಾರ ಹಮ್ಮಿ ಕೊಂಡಿದ್ದ “ಜಿಲ್ಲಾಧಿಕಾರಿಗಳ ನಡೆಹಳ್ಳಿಯ ಕಡೆ’ ಎಂಬ ಗ್ರಾಮ ವಾಸ್ತವ್ಯ ಕಾರ್ಯ ಕ್ರಮದ ಕುರಿತು ಮಾತನಾಡಿದರು. ವಿವಿಧ ಇಲಾಖೆಗಳಿಗೆ ಸಂಬಂಧಿಸಿದ 254 ಕ್ಕೂ ಹೆಚ್ಚು ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಇಂದೂ ಕುಂದು ಕೊರತೆ ಅಹವಾಲು ಸ್ವೀಕಾರ ಮಾಡಿ ಸಾಧ್ಯವಾದದ್ದನ್ನು ಸ್ಥಳದಲ್ಲಿಯೇ ಪರಿಹರಿಸಲಾಗುವುದು. ಉಳಿದ ಮನವಿಗಳನ್ನು ಸೀಮಿತ ಅವಧಿಯ ಕಾಲಮಿತಿಯೊಳಗೆ ಪರಿ ಹರಿಸ ಲಾಗುವುದು ಎಂದು ತಿಳಿಸಿದರು. ವಿವಿಧ ಇಲಾಖೆಗಳಿಂದ ಸಿಗುವ ಸೌಲಭ್ಯಗಳ ಕುರಿತು ಪ್ರದರ್ಶನ ಏರ್ಪಡಿಸಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಗರ್ಭಿಣಿಯರಿಗೆ ಸೀಮಂತ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಗರ್ಭಿಣಿಯರ ಮಗುವಿನ ಆರೋಗ್ಯಕರ ಬೆಳವಣಿಗೆಗೆ ಸೇವಿಸಬೇಕಾದ ಪೌಷ್ಟಿಕ ಆಹಾರಗಳ ಬಗ್ಗೆ ತಿಳಿಸುವುದಲ್ಲದೆ, ಮಾತೃ ವಂದನಾ ಕಾರ್ಯಕ್ರಮದಡಿ 5 ಸಾವಿರ ರೂ.ಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಗ್ರಾಮೀಣ ಭಾಗದಲ್ಲಿ ಇರುವ ಪಿಂಚಣಿ ಸೌಲಭ್ಯ, ಜಮೀನು ಸರ್ವೇ, ಸರ್ಕಾರಿ ಜಮೀನು ಗಳ ಒತ್ತುವರಿ ತೆರವು, ವಸತಿ ರಹಿತರಿಗೆ ಮನೆ ನಿರ್ಮಾಣ, ನಿವೇಶನ ಮತ್ತು ವಸತಿ ರಹಿತರಿಗೆ ನಿವೇಶನ ಮತ್ತು ಮನೆ ಸೌಲಭ್ಯ, ಆಧಾರ್‌ ತಿದ್ದುಪಡಿ, ಬಿಪಿಎಲ್‌ ಕಾರ್ಡ್‌ ಗಳಲ್ಲಿ ಹೆಸರು ಸೇರ್ಪಡೆ, ಹೆಸರು ತೆಗೆದು ಹಾಕುವುದು, ಹೊಸದಾಗಿ ಬಿಪಿಎಲ್‌ ಕಾರ್ಡ್‌ಗೆ ಅರ್ಜಿ ಸ್ವೀಕಾರ ಮಾಡಲಾಗುವುದು ಎಂದು ತಿಳಿಸಿದರು.

ಈ ವೇಳೆ ಜಿಪಂ ಸಿಇಒ ಎನ್‌.ಎಂ. ನಾಗರಾಜ್‌, ಅಪರ ಜಿಲ್ಲಾ ಧಿಕಾರಿ ಡಾ.ಸ್ನೇಹಾ, ಉಪ ವಿಭಾಗಾಧಿಕಾರಿ ಸೋಮಶೇಖರ್‌, ತಹಶೀಲ್ದಾರ್‌ ಶೋಭಿತಾ, ವಡಗೂರು ಗ್ರಾಪಂ ಅಧ್ಯಕ್ಷ ರಾಜಣ್ಣ, ಉಪಾಧ್ಯಕ್ಷೆ ಗಿರಿಜಮ್ಮ, ತಾಪಂ ಇಒಗಳಾದ ಬಾಬು ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

ಗ್ರಾಮಸ್ಥರ ಮನವಿ ಆಲಿಸಿದ ಜಿಲ್ಲಾಧಿಕಾರಿ :

ಗ್ರಾಮ ವಾಸ್ತವ್ಯದ ವೇಳೆ ಜಿಲ್ಲಾಧಿಕಾರಿಗೆ ಕುಂದು ಕೊರತೆಗಳ ಸ್ವೀಕಾರ ಸಭೆಯಲ್ಲಿಕೆಂಬೋಡಿ ಶಾಲೆಗೆ ಕ್ರೀಡಾಂಗಣ ವ್ಯವಸ್ಥೆ ಕಲ್ಪಿಸಬೇಕು ಎಂದು ಶಿಕ್ಷಕರು ಮನವಿ ಮಾಡಿದರು. ಇದಕ್ಕೆ ಕೂಡಲೇ ಸ್ಪಂದಿಸಿ 1 ವಾರದೊ ಳಗೆ ಜಾಗ ಗುರುತಿಸಿ ನೀಡಲಾಗುವುದು. ನರೇಗಾ ಯೋಜನೆಯಡಿ ಕ್ರೀಡಾಂಗಣ ನಿರ್ಮಾಣಮಾಡಿಸಿಕೊಡಲಾಗುವುದು ಎಂದು ತಿಳಿಸಿದರು.

ವೆಂಕಟರತ್ನಮ್ಮ ಎಂಬ ವರು ತನಗೆ ನಿವೇಶನ ಮತ್ತು ಮನೆ ಇಲ್ಲ ಒದಗಿಸಿಕೊಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ, 1 ವಾರ ದೊಳಗೆ ವಸತಿ ರಹಿತರು ಮತ್ತು ನಿವೇಶನ ರಹಿತರ ಪಟ್ಟಿ ನೀಡುವಂತೆ ಗ್ರಾಪಂ ಪಿಡಿಒಗಳಿಗೆ ಸೂಚಿಸಿದರು.

ಇವರೆಲ್ಲರಿಗೂ ಅಗತ್ಯ ಜಮೀನನ್ನು ಗುರುತಿಸಿ ನಿವೇಶನ ಹಾಗೂ ಮನೆ ಸೌಲಭ್ಯ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಗ್ರಾಮಸ್ಥರು ಎಚ್‌.ಮಲ್ಲಾಂಡಹಳ್ಳಿ ಕೆರೆ ಒತ್ತುವರಿ ಆಗಿರುವುದನ್ನು ಒತ್ತುವರಿ ತೆರವುಗೊಳಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ, ಸರ್ವೇ ಮಾಡಿಸಿ ಸರ್ಕಾರಿ ಜಮೀನನ್ನುಯಾರೇ ಒತ್ತುವರಿ ಮಾಡಿಕೊಂಡಿದ್ದರೂ  ತೆರವುಗೊಳಿ ಸಲಾಗುವುದು ಎಂದು ಭರವಸೆ ನೀಡಿದರು.

ಅಹವಾಲು ಸ್ವೀಕಾರದಲ್ಲಿ ಪಿಂಚಣಿ ಸಮಸ್ಯೆ, ಜಮೀನಿನ ಖಾತೆ ಆರ್‌ಟಿಸಿ ಸಮಸ್ಯೆ, ನಿವೇಶನ ಇಲ್ಲದಿರುವುದು, ಮನೆ ಇಲ್ಲದಿರು ವುದು ಮುಂತಾದ 100 ಕ್ಕೂ ಹೆಚ್ಚು ಅಹವಾಲುಗಳನ್ನು ಸಾರ್ವಜನಿಕರು ಜಿಲ್ಲಾಧಿಕಾರಿ ಗಳಿಗೆ ಸಲ್ಲಿಸಿದರು. ನಂತರ ಗ್ರಾಮದಾದ್ಯಂತ ಸಂಚರಿಸಿ ಗ್ರಾಮದ ಕುಂದುಕೊರತೆ ವೀಕ್ಷಿಸಿದರು, ಮನೆ ಮನೆಗೆ ತೆರಳಿ ಜನರ ಸಮಸ್ಯೆ ಆಲಿಸಿ ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next