Advertisement
ಏನಿದು ಘಟನೆ: ಶುಕ್ರವಾರ ಬೆಳಗ್ಗೆ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿ ನಿಗೂಢ ರೀತಿಯಲ್ಲಿ ಕಿರಿಯ ಮಹಿಳಾ ವೈದ್ಯರೊಬ್ಬರ ಅರೆ ನಗ್ನ ಶವ ಪತ್ತೆಯಾಗಿತ್ತು, ಈ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ಕಲಿಯುತ್ತಿರುವ ಇತರ ವಿದ್ಯಾರ್ಥಿಗಳು ಹಾಗೂ ತರಬೇತಿಯಲ್ಲಿದ್ದ ವೈದ್ಯರು ಸೇರಿ ವೈದ್ಯೆಯ ಹತ್ಯೆಯ ಕುರಿತು ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದೆ ಆದರೆ ಆಡಳಿತ ಮಂಡಳಿ ಇದು ಆತ್ಮಹತ್ಯೆ ಎಂದು ಹೇಳಿತ್ತು, ಆದರೆ ಮರಣೋತ್ತರ ಪರೀಕ್ಷೆ ನಡೆಸಿದ ವೇಳೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ದೃಢಪಟ್ಟಿದೆ ಎನ್ನಲಾಗಿದೆ. ಅಲಲ್ದೆ ಆಕೆಯ ದೇಹದ ಭಾಗಗಳಲ್ಲಿ ಗಾಯದ ಗುರುತುಗಳು ಪತ್ತೆಯಾಗಿತ್ತು.
ಕಿರಿಯ ವೈದ್ಯೆ ಹತ್ಯೆ ಬೆನ್ನಲ್ಲೇ ಆಸ್ಪತ್ರೆಯ ವೈದ್ಯರು ಸೇರಿದಂತೆ ಇತರ ಸಿಬಂದಿಗಳು ತಮ್ಮ ಸೇವೆಯನ್ನು ಮೊಟಕುಗೊಳಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ ಅಲ್ಲದೆ ಆಸ್ಪತ್ರೆಗೆ ಯಾವುದೇ ಭದ್ರತೆ ಇಲ್ಲ ಯಾರು ಯಾವ ಸಮಯದಲ್ಲೂ ಆಸ್ಪತ್ರೆಗೆ ಭೇಟಿ ನೀಡಬಹುದು ಯಾವುದೇ ತಪಾಸಣೆ ಇಲ್ಲದಂತಾಗಿದೆ ಎಂದು ಆರೋಪಿಸಿದ್ದಾರೆ.
Related Articles
ಸದ್ಯ ಆಸ್ಪತ್ರೆಯ ಎಲ್ಲ ಸಿಬಂದಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು ಆಸ್ಪತ್ರೆಯಲ್ಲಿ ತುರ್ತು ಸೇವೆ ಹೊರತುಪಡಿಸಿ ಬೇರೆ ಯಾವುದೇ ಸೇವೆಗಳು ನಡೆಯುತ್ತಿಲ್ಲ ಎಂದು ಹೇಳಲಾಗಿದೆ, ಅಲ್ಲದೆ ಆಸ್ಪತ್ರೆಯ ಅಧಿಕಾರಿಗಳೇ ಈ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
Advertisement
ಹತ್ಯೆಯಾದ ವೈದ್ಯೆ ಗುರುವಾರ ರಾತ್ರಿ ಕರ್ತವ್ಯದಲ್ಲಿ ಇದ್ದಳು ಎಂದು ಹೇಳಲಾಗಿದ್ದು ಇದೆ ವೇಳೆ ಆಕೆಯ ಮೇಲೆ ಲೈಂಗಿಕ ದೌರ್ಜನ ಎಸಗಿ ಹಲ್ಲೆ ಮಾಡಲಾಗಿದೆ ಎಂದು ಇಲ್ಲಿನ ಸಿಬಂದಿಗಳು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.