ಕೋಲ್ಕತಾ: ಪಶ್ಚಿಮಬಂಗಾಳದ ಪುರಸಭೆ ಚುನಾವಣೆಯಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಜಯಭೇರಿಯತ್ತ ದಾಪುಗಾಲಿಟ್ಟಿದ್ದು, ಇದೊಂದು ಐತಿಹಾಸಿಕ ಸಾಧನೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಡಿಸೆಂಬರ್ 21) ತಿಳಿಸಿದ್ದಾರೆ.
ಇದನ್ನೂ ಓದಿ:ಇವೆಂಟ್ ಮಾಡುವ ಹಾಗಿಲ್ಲ : ಹೊಸವರ್ಷಾಚರಣೆಗೆ ಸರಕಾರದ ಮಾರ್ಗಸೂಚಿ
ಕೋಲ್ಕತಾ ಮುನ್ಸಿಪಲ್ ಕಾರ್ಪೋರೇಶನ್ ಚುನಾವಣೆಯ ಮತಎಣಿಕೆ ನಡೆಯುತ್ತಿದ್ದು, ಬಹುತೇಕ ಎಲ್ಲಾ ಸ್ಥಾನಗಳಲ್ಲಿ ಟಿಎಂಸಿ ಮುನ್ನಡೆ ಸಾಧಿಸಿರುವುದಾಗಿ ವರದಿ ತಿಳಿಸಿದೆ. ಇದೊಂದು ದಾಖಲೆಯ ಗೆಲುವಾಗಿದ್ದು, ಜನರು ನಮ್ಮ ಕೆಲಸವನ್ನು ಒಪ್ಪಿಕೊಂಡಿದ್ದಾರೆ ಎಂಬ ಸ್ಪಷ್ಟ ಸಂದೇಶವಾಗಿದೆ. ಚುನಾವಣೆಯಲ್ಲಿ ಬಿಜೆಪಿ, ಎಡಪಕ್ಷ ಹಾಗೂ ಕಾಂಗ್ರೆಸ್ ಒಂದೂ ಸ್ಥಾನದಲ್ಲಿ ಗೆಲುವು ಸಾಧಿಸಿಲ್ಲ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಪುರಸಭೆಯ 144 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ 54 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಉಳಿದ 78 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವುದಾಗಿ ವರದಿ ವಿವರಿಸಿದೆ.
ಕೋಲ್ಕತಾ ಮುನ್ಸಿಪಲ್ ಕಾರ್ಪೋರೇಶನ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲಾ ಅಭ್ಯರ್ಥಿಗಳಿಗೂ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ. ಅಲ್ಲದೇ ನಮ್ಮ ಮೇಲೆ ವಿಶ್ವಾಸವಿಟ್ಟು ಮತಚಲಾಯಿಸಿದ ಪ್ರತಿಯೊಬ್ಬ ಮತದಾರರಿಗೂ ಅಭಿನಂದನೆಗಳು ಎಂದು ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.
ಚುನಾವಣಾ ಫಲಿತಾಂಶದ ಆರಂಭದಲ್ಲಿ 102 ವಾರ್ಡ್ ಗಳಲ್ಲಿ ಆಡಳಿತಾರೂಢ ಟಿಎಂಸಿ 93 ವಾರ್ಡ್ ಗಳಲ್ಲಿ ಮುನ್ನಡೆ ಸಾಧಿಸಿದ್ದು, ವಿರೋಧ ಪಕ್ಷಗಳು ಕೇವಲ 8 ವಾರ್ಡ್ ಗಳಲ್ಲಿ ಮುನ್ನಡೆಯಲ್ಲಿದ್ದವು. ಕೇವಲ ಒಬ್ಬ ಪಕ್ಷೇತರ ಅಭ್ಯರ್ಥಿ ಮಾತ್ರ ಮುನ್ನಡೆಯಲ್ಲಿದ್ದರು ಎಂದು ವರದಿ ತಿಳಿಸಿದೆ.