Advertisement
ಈಗಾಗಲೇ ಆರೋಪಿಯ ಮನೋವಿಶ್ಲೇಷ ಣೆಯ ವರದಿಯನ್ನು ತಯಾರಿಸಲು ಸಿಬಿಐ ಸೂಚಿಸಿದ್ದು, ಇದರ ಆಧಾರದ ಮೇಲೆ ಮುಂದಿನ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಅಪರಾಧ ನಡೆದ ಸಮಯದಲ್ಲಿ ರಾಯ್ ಆ ಸ್ಥಳದಲ್ಲಿದ್ದ ಎಂಬುದಕ್ಕೆ ಸಾಕಷ್ಟು ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಗಳಿವೆ ಎಂದು ಸಿಬಿಐ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಕೋಲ್ಕತಾ: ಇಲ್ಲಿನ ಆರ್‌ಜಿಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರ ಪ್ರಕರಣದ ತನಿಖೆಯನ್ನು ಕಲ್ಕತ್ತಾ ಹೈಕೋರ್ಟ್ ಸಿಬಿಐಗೆ ವಹಿಸಿದೆ. ಆಸ್ಪತ್ರೆಯ ಪ್ರಾಂಶುಪಾಲ ಸಂದೀಪ್ ಘೋಷ್ ಅವರ ಕಾಲದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಬಗ್ಗೆ ತನಿಖೆ ಇ.ಡಿ. ತನಿಖೆಗೆ ಆದೇಶಿಸಬೇಕು ಎಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು.
Related Articles
ಕೋಲ್ಕತಾ ಅತ್ಯಾಚಾರದ ಪ್ರಕರಣದ ಆರೋಪಿ ಸಂಜಯ್ ರಾಯ್‌ಗೆ ಸುಳ್ಳುಪತ್ತೆ ಪರೀಕ್ಷೆ ನಡೆಸಲು ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. ಕೇಂದ್ರ ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಈ ಪರೀಕ್ಷೆ ನಡೆಸಲಿದ್ದಾರೆ. ಆರೋಪಿಯ ಡಿಎನ್‌ಎ ಮತ್ತು ಮನೋವಿಶ್ಲೇಷಣ ವರದಿಗೆ ಸಿಬಿಐ ಅಧಿಕಾರಿಗಳು ಕಾಯುತ್ತಿದ್ದು, ಇದು ಸಿಕ್ಕಿದ ಬಳಿಕ ವಿಚಾರಣೆಯ ದಿಕ್ಕನ್ನು ನಿರ್ಧರಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರ್‌ಜಿ ಕಾರ್ ಕಾಲೇಜಿನ ಪ್ರಾಂಶುಪಾಲ ಹಾಗೂ ಇತರರಿಗೆ ಸುಳ್ಳುಪತ್ತೆ ಪರೀಕ್ಷೆ ನಡೆಸಲು ಕೋರ್ಟ್ ಈಗಾಗಲೇ ಒಪ್ಪಿಗೆ ನೀಡಿದೆ.
Advertisement