ಕೊಲ್ಕತ್ತಾ: ಕೋಲ್ಕತ್ತಾದ ಆರ್‌ಜಿ ಕಾರ್ ಮೆಡಿಕಲ್ ಕಾಲೇಜಿನಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ನಡೆಯುತ್ತಿರುವ ಮಧ್ಯೆ, ಸಿಬಿಐ ಶುಕ್ರವಾರ ಕಾಲೇಜಿನ ಮಾಜಿ ಪ್ರಾಂಶುಪಾಲರಿಗೆ ಸಮನ್ಸ್ ನೀಡಿದೆ.
ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ 31 ವರ್ಷದ ಟ್ರೈನಿ ಮಹಿಳಾ ವೈದ್ಯೆಯ ಶವ ಅರೆಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೊಲೀಸರ ಪ್ರಕಾರ, ಘಟನೆಯು ಮುಂಜಾನೆ 3 ರಿಂದ 5 ರ ನಡುವೆ ನಡೆದಿದೆ. ಇನ್ನು ಶವಪರೀಕ್ಷೆ ವರದಿಯಲ್ಲಿ ವೈದ್ಯೆಯ ಕತ್ತು ಹಿಸುಕಿ ಕೊಲೆ ಮಾಡುವ ಮೊದಲು ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ವರದಿಯ ಪ್ರಕಾರ, ಆಕೆಯ ಕಣ್ಣು ಮತ್ತು ಬಾಯಿಯಿಂದ ರಕ್ತಸ್ರಾವವಾಗಿದೆ ಮತ್ತು ಮುಖ, ಹೊಟ್ಟೆ, ಎಡ ಕಾಲು, ಕುತ್ತಿಗೆ, ಬಲಗೈ, ಉಂಗುರ ಬೆರಳು ಮತ್ತು ತುಟಿಗಳ ಮೇಲೆ ಗಾಯಗಳಾಗಿವೆ. ಸಂತ್ರಸ್ತೆಯ ಖಾಸಗಿ ಭಾಗಗಳಿಂದ ರಕ್ತಸ್ರಾವವಾಗಿದೆ ಎಂದು ವರದಿಯಲ್ಲಿ ದಾಖಲಾಗಿದೆ.
ಕೋಲ್ಕತ್ತಾದಲ್ಲಿ ನಡೆದ ಭೀಕರ ಘಟನೆಯ ಬಗ್ಗೆ ದೇಶದಾದ್ಯಂತ ದೇಶಾದ್ಯಂತ ಬೃಹತ್ ಪ್ರತಿಭಟನೆಗಳು ನಡೆಯುತ್ತಿದ್ದು, ಪೊಲೀಸರು ಘಟನೆಯ ಸಂಪೂರ್ಣ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲರನ್ನು ಸಿಬಿಐ ವಿಚಾರಣೆಗೆ ಕರೆಸಿದೆ
ದೆಹಲಿಯಾದ್ಯಂತ ಇರುವ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ಸ್ (RDAs) ಶುಕ್ರವಾರ, ಆಗಸ್ಟ್ 16 ರಂದು ರಾಷ್ಟ್ರ ರಾಜಧಾನಿಯ ನಿರ್ಮಾಣ್ ಭವನದಿಂದ ಜಂಟಿ ಪ್ರತಿಭಟನಾ ಮೆರವಣಿಗೆಯನ್ನು ನಡೆಸಲಿದೆ. ಮಧ್ಯಾಹ್ನ 2 ಗಂಟೆಗೆ ಪ್ರತಿಭಟನೆ ಆರಂಭವಾಗಲಿದ್ದು ದೆಹಲಿ ಮೆಡಿಕಲ್ ಅಸೋಸಿಯೇಷನ್ (ಡಿಎಂಎ) ಕೂಡ ಗುರುವಾರ ಅತ್ಯಾಚಾರ-ಕೊಲೆ ಪ್ರಕರಣದ ಬಗ್ಗೆ ಚರ್ಚಿಸಲು ತುರ್ತು ಸಭೆ ನಡೆಸಿತು ಮತ್ತು ಇಂದು ಸಂಜೆ 5 ಗಂಟೆಗೆ ಇಂಡಿಯಾ ಗೇಟ್‌ನಲ್ಲಿ ಕ್ಯಾಂಡಲ್ ಮಾರ್ಚ್ ನಡೆಸಲು ಅಸೋಸಿಯೇಷನ್ ನಿರ್ಧರಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿ ಸಂಜೋಯ್ ರಾಯ್ ಎಂದು ಗುರುತಿಸಲಾದ ಓರ್ವ ಆರೋಪಿಯನ್ನು ಇದುವರೆಗೆ ಬಂಧಿಸಲಾಗಿದೆ. ಆರ್‌ಜಿ ಕಾರ್ ಮೆಡಿಕಲ್ ಕಾಲೇಜಿನೊಂದಿಗೆ ಸಂಬಂಧ ಹೊಂದಿಲ್ಲದ ಆದರೆ ಆಗಾಗ್ಗೆ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದ ನಾಗರಿಕ ಸ್ವಯಂಸೇವಕ ರಾಯ್ ಅವರನ್ನು ಶನಿವಾರ ಬಂಧಿಸಲಾಯಿತು, ನಂತರ ಅವರನ್ನು ಸೆಕ್ಷನ್ 64 (ಅತ್ಯಾಚಾರ) ಮತ್ತು 103 ಆರೋಪಗಳ ಅಡಿಯಲ್ಲಿ ಕೇಸು ದಾಖಲಿಸಿಕೊಳ್ಳಲಾಗಿದೆ.
ಇನ್ನು ಟ್ರೈನಿ ವೈದ್ಯೆ ಹತ್ಯೆ ಖಂಡಿಸಿ ಬುಧವಾರ ರಾತ್ರಿ ಆಸ್ಪತ್ರೆಯ ಹೊರಗೆ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಏಕಾಏಕಿ ಯುವಕರ ಗುಂಪೊಂದು ಆಸ್ಪತ್ರೆ ಒಳಗೆ ಪ್ರವೇಶಿಸಿ ತುರ್ತು ಘಟಕವನ್ನು ಪುಡಿಗೈದು ಅಲ್ಲಿದ್ದ ವಸ್ತುಗಳನ್ನು ನಾಶಪಡಿಸಿದೆ. ಇದರ ನಡುವೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಳುಹಿಸಿದ ಟಿಎಂಸಿ ಗೂಂಡಾಗಳು ಈ ವಿಧ್ವಂಸಕ ಕೃತ್ಯ ನಡೆಸಿದ್ದಾರೆ ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಆರೋಪಿಸಿದ್ದಾರೆ.