Advertisement

Kolkata Trainee Doctor Case: ಮೆಡಿಕಲ್‌ ಕಾಲೇಜು ಮಾಜಿ ಪ್ರಾಂಶುಪಾಲ, ಠಾಣಾಧಿಕಾರಿಯ ಬಂಧನ

08:11 AM Sep 15, 2024 | Team Udayavani |

ಕೋಲ್ಕತ್ತಾ: ಇಲ್ಲಿನ ಟ್ರೈನಿ ವೈದ್ಯೆ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಹತ್ಯೆ ಪ್ರಕರಣದಲ್ಲಿ ಇದೀಗ ಪ್ರಮುಖ ಬೆಳವಣಿಗೆಯೊಂದು ನಡೆದಿದೆ. ಘಟನೆ ನಡೆದಿದ್ದ ಆರ್.ಜಿ ಕರ್‌ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಹಾಗೂ ಘಟನೆಯ ಪ್ರಾಥಮಿಕ ತನಿಖೆ ನಡೆಸಿದ್ದ ಠಾಣಾಧಿಕಾರಿಯನ್ನು ಶನಿವಾರ (ಸೆ.14) ರಾತ್ರಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

Advertisement

ತನಿಖಾಧಿಕಾರಿಗಳ ದಿಕ್ಕು ತಪ್ಪಿಸುವಿಕೆ ಮತ್ತು ಸಾಕ್ಷ್ಯ ನಾಶದ ಕಾರಣದಿಂದ ಅವರ ಬಂಧನವಾಗಿದೆ ಎಂದು ವರದಿಯಾಗಿದೆ.

ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ಪೊಲೀಸ್ ಅಧಿಕಾರಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಹಾಳುಮಾಡಲು ಪ್ರಯತ್ನಿಸಿದ್ದರು. ಇದು ರಾಷ್ಟ್ರದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರತಿಭಟನಾ ನಿರತ ವೈದ್ಯರು ಶನಿವಾರ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಲು ಸಿಎಂ ನಿವಾಸಕ್ಕೆ ತೆರಳಿದ್ದರು. ಆದರೆ ಮಾತುಕತೆಯನ್ನು ನೇರಪ್ರಸಾರ ಮಾಡುವದಕ್ಕೆ ಮಮತಾ ಬ್ಯಾನರ್ಜಿ ವಿರೋಧ ವ್ಯಕ್ತಪಡಿಸಿದ ಕಾರಣಕ್ಕೆ ಭೇಟಿಯಾಗದೆ ಹಿಂತಿರುಗಿದ್ದರು. ಇದಾದ ಕೆಲವೇ ಸಮಯದಲ್ಲಿ ಈ ಬಂಧನವಾಗಿದೆ.

Advertisement

ಸಂದೀಪ್‌ ಘೋಷ್‌ ವಿರುದ್ದ ಹಣಕಾಸಿನ ಅವ್ಯವಹಾರಗಳ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ಇದೀಗ ಆತನ ವಿರುದ್ದ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನೂ ದಾಖಲಿಸಿದೆ.

ಆರ್.ಜಿ ಕರ್‌ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್‌ ಹಾಲ್‌ ನಲ್ಲಿ ಆಗಸ್ಟ್‌ 9ರಂದು ಈ ಅಮಾನವೀಯ ಘಟನೆ ನಡೆದಿತ್ತು. ಟ್ರೈನಿ ವೈದ್ಯೆಯ ದೇಹ ತೊರೆತ ಬಳಿಕ ನಡೆದ ತನಿಖೆಯಲ್ಲಿ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.