Advertisement

ಜಯದ ವಿಶ್ವಾಸದಲ್ಲಿ RCB-KKR: ಟಾಸ್ ಗೆದ್ದ ಮಾರ್ಗನ್ ಪಡೆ ಬ್ಯಾಟಿಂಗ್ ಆಯ್ಕೆ: ತಂಡ ಇಂತಿದೆ…

12:07 PM Nov 03, 2015 | Mithun PG |

ಅಬುಧಾಬಿ: ಐಪಿಎಲ್ 13ನೇ ಆವೃತ್ತಿಯ 39ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಮಾರ್ಗನ್ ಪಡೆ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

Advertisement

ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಸೂಪರ್ ಓವರ್ ನಲ್ಲಿ ಗೆದ್ದು ಬೀಗಿದ ಕೊಲ್ಕತ್ತಾ, ಇದೀಗ ಬಲಿಷ್ಟ ತಂಡವಾಗಿ ಹೊರಹೊಮ್ಮಿದೆ. ವೇಗದ ಬೌಲರ್ ಲಾಕಿ ಫರ್ಗ್ಯೂಸನ್ ಆಗಮನ ತಂಡದ ಶಕ್ತಿಯನ್ನು ಹೆಚ್ಚಿಸಿದೆ. ಈವರೆಗೂ 5 ಗೆಲುವಿನೊಂದಿಗೆ 10 ಅಂಕಗಳಿಸಿ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಇನ್ನು 6 ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿರುವ ಕೊಹ್ಲಿ ನೇತೃತ್ವದ ಬೆಂಗಳೂರು ಫುಲ್ ಫಾರ್ಮ್ ನಲ್ಲಿದೆ. ಕಳೆದ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಗೆದ್ದಿರುವ ಬೆಂಗಳೂರು ಆತ್ಮವಿಶ್ವಾಸದಲ್ಲಿದೆ.  ಈ ಆವೃತ್ತಿಯಲ್ಲಿ ಕೆಕೆಆರ್ ವಿರುದ್ಧ ಎರಡನೇ ಬಾರಿ ಎದುರಾಗುತ್ತಿದೆ.

ಇತ್ತಂಡಗಳು 25 ಬಾರಿ ಮುಖಾಮುಖಿಯಾಗಿದ್ದು ಆರ್ ಸಿಬಿ 11 ರಲ್ಲಿ ಮತ್ತು ಕೆಕೆಆರ್ 14ರಲ್ಲಿ ಜಯಗಳಿಸಿದೆ.

ಆಡುವ ಹನ್ನೊಂದರ ಬಳಗ

Advertisement

ರಾಯಲ್ ಚಾಲೆಂಜರ್ಸ್ ಬೆಂಗಳೂರು: ದೇವದತ್ ಪಡಿಕ್ಕಲ್, ಆರನ್ ಫಿಂಚ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್ , ಗುರ್ಕೀರತ್ ಸಿಂಗ್ ಮನ್, ವಾಷಿಂಗ್ಟನ್ ಸುಂದರ್, ಕ್ರಿಸ್ ಮೋರಿಸ್, ಮೊಹಮ್ಮದ್ ಸಿರಾಜ್, ಇಸುರು ಉದಾನಾ, ನವದೀಪ್ ಸೈನಿ, ಯುಜ್ವೇಂದ್ರ ಚಹಲ್

ಕೋಲ್ಕತಾ ನೈಟ್ ರೈಡರ್ಸ್: ಶುಭ್ ಮನ್ ಗಿಲ್, ರಾಹುಲ್ ತ್ರಿಪಾಠಿ, ನಿತೀಶ್ ರಾಣಾ, ಇಯೊನ್ ಮಾರ್ಗನ್ (ನಾಯಕ), ದಿನೇಶ್ ಕಾರ್ತಿಕ್, ಟಾಮ್ ಬಾಂಟನ್, ಪ್ಯಾಟ್ ಕಮ್ಮಿನ್ಸ್, ಲಾಕಿ ಫರ್ಗ್ಯೂಸನ್, ಕುಲದೀಪ್ ಯಾದವ್, ಪ್ರಸಿದ್ಧ ಕೃಷ್ಣ, ವರುಣ್ ಚಕ್ರವರ್ತಿ

 

Advertisement

Udayavani is now on Telegram. Click here to join our channel and stay updated with the latest news.

Next