ಕೊಳ್ಳೇಗಾಲ: ಹನೂರು ತಾಲ್ಲೂಕಿನ ಕೌದಳ್ಳಿ ಬಳಿ ಕಾರು ಮತ್ತು ಟಿ ಟಿ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮಹಿಳೆ ಸೇರಿದಂತೆ 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಸೋಮವಾರ ಸಂಭವಿಸಿದೆ.
ಆನೇಕಲ್ ತಾಲೂಕಿನ ನಿವಾಸಿ ಮಾಲಾ ತೀವ್ರ ಗಾಯಗೊಂಡು ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆ ವಿವರ: ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿ ವಾಪಸ್ ಆನೇಕಲ್ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಟಿಟಿ ವಾಹನ ಕೌದಳ್ಳಿ ಗ್ರಾಮದ ಹೊರವಲಯದಲ್ಲಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ಟಿಟಿಯಲಿದ್ದ ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ತೀವ್ರ ಗಾಯಗೊಂಡಿದ್ದ ಆನೇಕಲ್ ಗ್ರಾಮದ ನಿವಾಸಿ ಹರೀಶ್ ರವರ ಪತ್ನಿ ಮಾಲಾ ರವರನ್ನು 108 ಆಂಬುಲೆನ್ಸ್ ಮೂಲಕ ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ .ಇವರ ಇಬ್ಬರು ಮಕ್ಕಳಿಗೂ ಸಣ್ಣಪುಟ್ಟ ಗಾಯಗಳಾಗಿದೆ .ಉಳಿದಂತೆ ಟಿಟಿ ವಾಹನದಲ್ಲಿದ್ದ ಹತ್ತಕ್ಕೂ ಹೆಚ್ಚು ಜನರು ಸಹ ಗಾಯಗೊಂಡಿದ್ದು ಸಮೀಪದ ಕೌದಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಪಡೆದುಕೊಂಡು ಖಾಸಗಿ ಆಸ್ಪತ್ರೆಗಳಿಗೆ ತೆರಳಿದ್ದಾರೆ .
ಈ ಸಂಬಂಧ ಹನೂರು ತಾಲ್ಲೂಕಿನ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.