Advertisement
ತಿರುವನಂತಪುರದಿಂದ ಕೊಲ್ಲೂರು ಕ್ಷೇತ್ರ ದರ್ಶನಕ್ಕೆ 14 ಮಂದಿಯ ತಂಡ ಆಗಮಿಸಿತ್ತು. ಅವರು ಸೌಪರ್ಣಿಕಾ ಸ್ನಾನಘಟ್ಟಕ್ಕೆ ತೆರಳಿ ತೀರ್ಥ ಸ್ನಾನಕ್ಕೆಂದು ನದಿಗೆ ಇಳಿದಿದ್ದರು. ಶಾಂತಿ ಶೇಖರನ್ ಅವರು ಪುತ್ರ ಆದಿತ್ಯ ನದಿಯ ಸೆಳೆತಕ್ಕೆ ಒಳಗಾಗಿ ನೀರು ಪಾಲಾಗುತ್ತಿರುವುದನ್ನು ಕಂಡು ಆತನನ್ನು ರಕ್ಷಿಸಲು ನೀರಿಗೆ ಧುಮುಕಿದ್ದರು. ಆಕೆಯ ಪತಿ ಮುರುಗನ್ ಕೂಡ ಪುತ್ರನನ್ನು ಕಾಪಾಡಲು ನೀರಿಗೆ ಹಾರಿದ್ದರು. ಆದಿತ್ಯ ಹಾಗೂ ಮುರುಗನ್ ಈಜಿ ದಡ ಸೇರಿದರೆ ಶಾಂತಿ ಶೇಖರನ್ ನೀರಿನ ಸೆಳೆತಕ್ಕೆ ಸಿಲುಕಿ ನದಿಯಲ್ಲಿ ಕೊಚ್ಚಿ ಹೋಗಿದ್ದರು.
ಮಳೆಗಾಲದಲ್ಲಿ ಪ್ರತೀ ವರ್ಷವೂ ಅವಘಡ ಸಂಭವಿಸುವ ಇಲ್ಲಿ ಭದ್ರತೆಗೆ ಕ್ರಮ ಕೈಗೊಳ್ಳಬೇಕಾಗಿದೆ.ರಾತ್ರಿ ಹೊತ್ತಿನಲ್ಲಿ ಪ್ರಕಾಶಮಾನವಾದ ಬೆಳಕಿನ ವ್ಯವಸ್ಥೆ, ಅಲ್ಲದೇ ಸಿಬಂದಿಯನ್ನು ನೇಮಿಸುವುದು ಸೂಕ್ತ. ಮಳೆಗಾಲದಲ್ಲಿ ಭಕ್ತರು ನೀರಿಗಿಳಿಯದಂತೆ ತಡೆಬೇಲಿ ನಿರ್ಮಿಸಬೇಕೆಂದು ಯಾತ್ರಾರ್ಥಿಗಳು ಆಗ್ರಹಿಸಿದ್ದಾÃ