ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಲುವಾಗಿ ಮೇ 9ರಂದು ಅಪಾರ ಭಕ್ತರ ಸಮ್ಮುಖದಲ್ಲಿ ರಥೋತ್ಸವ ಸಂಭ್ರಮದಿಂದ ಜರುಗಿತು.
ದೇಗುಲದ ತಂತ್ರಿ ಡಾ| ನಿತ್ಯಾನಂದ ಅಡಿಗ ಅವರ ನೇತೃತ್ವದಲ್ಲಿ ಅ ಧಿವಾಸ ಹೋಮ, ರಥಶುದ್ಧಿ ಹೋಮ ಹಾಗೂ ಮಹಾಪೂಜೆ ನಡೆಯಿತು. ರಥಾರೋಹಣಕ್ಕೆ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕೆರಾಡಿ, ಕಾರ್ಯನಿರ್ವಹಣಾ ಧಿಕಾರಿ ಎಸ್.ಸಿ. ರವಿ ಕೊಟಾರಗಸ್ತಿ ಚಾಲನೆ ನೀಡಿದರು.
ಸಮಿತಿಯ ಸದಸ್ಯರಾದ ಡಾ| ಕೆ. ರಾಮ ಚಂದ್ರ ಅಡಿಗ, ಡಾ| ಅತುಲ್ ಕುಮಾರ್ ಶೆಟ್ಟಿ, ಜಯಾನಂದ ಹೋಬಳಿದಾರ, ಗಣೇಶ ಕಿಣಿ ಬೆಳ್ವೆ, ಸಂಧ್ಯಾರಮೇಶ, ಗೋಪಾಲಕೃಷ್ಣ ನಾಡ, ಶೇಖರ ಪೂಜಾರಿ, ರತ್ನಾ ಆರ್. ಕುಂದರ್, ಉಪ ಕಾರ್ಯ ನಿರ್ವಹಣಾಧಿ ಕಾರಿ ಗೋವಿಂದ ನಾಯ್ಕ, ರಥಶಿಲ್ಪಿಗಳಾದ ಲಕ್ಷ್ಮೀನಾರಾಯಣ ಆಚಾರ್ಯ, ರಾಜಗೋಪಾಲ ಆಚಾರ್ಯ ಉಪಸ್ಥಿತರಿದ್ದರು.
ನಾಳೆ ಧ್ವಜಾವರೋಹಣ
ಬ್ರಹ್ಮಕಲಶೋತ್ಸವದ ಸಲುವಾಗಿ ನಡೆಯು ತ್ತಿರುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮೇ 11ರಂದು ಪೂರ್ಣಕುಂಭಾಭಿಷೇಕ ಹಾಗೂ ಆಶೀರ್ವಚನ ದೊಡನೆ ಪೂರ್ಣಗೊಳ್ಳುವುದು ಎಂದು ದೇಗುಲದ ವ್ಯವ ಸ್ಥಾಪನ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕೆರಾಡಿ ಹಾಗೂ ಕಾರ್ಯನಿರ್ವಹಣಾಧಿ ಕಾರಿ ರವಿ ಕೊಟಾರಗಸ್ತಿ ತಿಳಿಸಿದ್ದಾರೆ.
Related Articles
ಸಮ್ಮಾನ
ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ರಥ ಶ್ರೀ ದೇಗುಲಕ್ಕೆ ಕಾಣಿಕೆ ರೂಪದಲ್ಲಿ ನೀಡಿದ ದಾನಿಗಳಾದ ಉದ್ಯಮಿ ಸುನಿಲ್ ಆರ್. ಶೆಟ್ಟಿ ದಂಪತಿ ಹಾಗೂ ವೀರಭದ್ರ ದೇಗುಲದ ಪುನರ್ ನಿರ್ಮಾಣಕ್ಕಾಗಿ ಸುಮಾರು 2 ಕೋಟಿ ರೂ. ಮೊತ್ತವನ್ನು ದೇಣಿಗೆ ರೂಪದಲ್ಲಿ ನೀಡಿದ ಹೈದರಾಬಾದಿನ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಅವರನ್ನು ಗೌರವಿಸಲಾಯಿತು.
20 ಸಾವಿರಕ್ಕೂ ಮಿಕ್ಕಿ ಭಕ್ತರು ಸಾಕ್ಷಿ
ಕರ್ನಾಟಕ ಸಹಿತ ವಿವಿಧ ರಾಜ್ಯಗಳಿಂದ ಆಗಮಿಸಿದ 20 ಸಾವಿರಕ್ಕೂ ಮಿಕ್ಕಿ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು.