Advertisement
ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ವಾಹನ ರ್ಯಾಲಿಯಲ್ಲಿ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.
ದಾಖಲೆಯ ಅಂತರದಲ್ಲಿ ಜಯ ಸಾಧಿಸಲು ಕಾರಣರಾದ ಎಲ್ಲಾ ಮತದಾರರಿಗೆ ರಾಘವೇಂದ್ರ ಅಭಿನಂದನೆ ಸಲ್ಲಿಸಿದರು. ಬೈಂದೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪೂರಕವಾದ ವ್ಯವಸ್ಥೆ ಕಲ್ಪಿಸುವುದಕ್ಕಾಗಿ ಬದ್ಧ ಎಂದು ಅವರು ಹೇಳಿದರು. ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಮಾತನಾಡಿ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಸಾಧನೆಯ ಹರಿಕಾರವಾಗಲಿದೆ. ಜನಪರ ಕಾಳಜಿಯ ರಾಘವೇಂದ್ರ ಇಲ್ಲಿನ ಎಲ್ಲಾ ಸಮಸ್ಯೆಗಳನ್ನು ಖಂಡಿತ ಬಗೆಹರಿಸುತ್ತಾರೆ. ಶಾಸಕನಾಗಿ ಎಲ್ಲಾ ವರ್ಗದ ಜನರ ಬೇಡಿಕೆ ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಾರೆ ಎಂದು ಹೇಳಿದರು.
Related Articles
Advertisement
ಮೂಕಾಂಬಿಕೆಗೆ ವಿಶೇಷ ಪೂಜೆಈ ಸಂದರ್ಭ ಬಿಜೆಪಿ ಮುಖಂಡರು ಬೆಳಗ್ಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.