Advertisement

ಕೊಲ್ಲೂರು: ಸಂಭ್ರಮದ ರಥೋತ್ಸವ ಸಂಪನ್ನ; 400 ವರುಷ ಇತಿಹಾಸದ ಬ್ರಹ್ಮರಥದ ಕೊನೆಯ ರಥೋತ್ಸವ ?

01:22 AM Mar 26, 2022 | Team Udayavani |

ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ರಥೋತ್ಸವ ಮಾ. 25ರಂದು ನೆರೆದ ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಜರಗಿತು.

Advertisement

ಅರ್ಚಕರಾದ ರಾಮಚಂದ್ರ ಅಡಿಗ, ಕೆ.ಎನ್‌. ಗೋವಿಂದ ಅಡಿಗ, ಡಾ| ಕೆ.ಎನ್‌.ನರಸಿಂಹ ಅಡಿಗ, ಸುಬ್ರಹ್ಮಣ್ಯ ಅಡಿಗ, ಶ್ರೀಧರ ಅಡಿಗ, ಅರ್ಚಕ ನಿತ್ಯಾನಂದ ಅಡಿಗ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಗಳು ನಡೆಯಿತು.

ದೇಗುಲದಲ್ಲಿ ಬೆಳಗ್ಗೆ ಮುಹೂರ್ತ ಬಲಿ, ಕ್ಷಿಪ್ರ ಬಲಿ ಮತ್ತು ರಥಬಲಿ ನಡೆಯಿತು. ಸಂಜೆಯ ರಥೋತ್ಸವದಲ್ಲಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಉಪಕಮಿಷನರ್‌ ಕೆ. ರಾಜು, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ದೇಗುಲದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ, ಇಒ ಮಹೇಶ, ಉಪ ಕಾರ್ಯನಿರ್ವಹಣಾಧಿಕಾರಿ ಗೋವಿಂದ ನಾಯ್ಕ, ಸಮಿತಿಯ ಸದಸ್ಯರಾದ ಡಾ| ಅತುಲ್‌ ಕುಮಾರ್‌ ಶೆಟ್ಟಿ, ಜಯಾನಂದ ಹೋಬಳಿದಾರ, ಗೋಪಾಲಕೃಷ್ಣ ನಾಡ, ಗಣೇಶ ಕಿಣಿ ಬೆಳ್ವೆ, ಶೇಖರ ಪೂಜಾರಿ, ಸಂಧ್ಯಾ ರಮೇಶ, ರತ್ನಾ ಆರ್‌. ಕುಂದರ್‌, ಮಾಜಿ ಧರ್ಮದರ್ಶಿ ರಮೇಶ ಗಾಣಿಗ ಕೊಲ್ಲೂರು, ವಂಡಬಳ್ಳಿ ಜಯರಾಮ ಶೆಟ್ಟಿ, ಮಂದಾರ್ತಿ ದೇಗುಲದ ಇಒ ರವಿ ಕೊಟಾರಗಸ್ತಿ, ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲದ ಆಡಳಿತ ಮೊಕ್ತೇಸರ ಸಿ. ಸದಾಶಿವ ಶೆಟ್ಟಿ, ಜಿ.ಪಂ. ಮಾಜಿ ಸದಸ್ಯರಾದ ರಾಜು ಪೂಜಾರಿ, ಶಂಕರ ಪೂಜಾರಿ, ಉದ್ಯಮಿ ಕಾಪು ವಾಸುದೇವ ಶೆಟ್ಟಿ, ಕೊಲ್ಲೂರು ಗ್ರಾ.ಪಂ. ಅಧ್ಯಕ್ಷ ಶಿವರಾಮಕೃಷ್ಣ ಭಟ್‌ ಉಪಸ್ಥಿತರಿದ್ದರು.

ಇದನ್ನೂ ಓದಿ:ಯಾವ ಸ್ವಾಮೀಜಿಗಳ ಬಗ್ಗೆಯೂ ನಾನು ಅಗೌರವದಿಂದ ಮಾತನಾಡಿಲ್ಲ : ಸಿದ್ದು

400 ವರುಷ ಇತಿಹಾಸದ ಬ್ರಹ್ಮರಥದ ಕೊನೆಯ ರಥೋತ್ಸವ ?
ಮುರ್ಡೇಶ್ವರದ ಖ್ಯಾತ ಉದ್ಯಮಿ ದಿ| ಆರ್‌.ಎನ್‌. ಶೆಟ್ಟಿಯವರ ಪುತ್ರ ಸುನಿಲ್‌ ಶೆಟ್ಟಿ ಕುಟುಂಬಸ್ಥರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿಯವರ ಮನವಿಗೆ ಸ್ಪಂದಿಸಿ, ಶ್ರೀ ದೇವಿಗೆ ಹರಕೆ ರೂಪದಲ್ಲಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನೂತನ ರಥ ನಿರ್ಮಿಸಿಕೊಡಲು ಸಮ್ಮತಿಸಿದ್ದಾರೆ.

Advertisement

ಕೋಟೇಶ್ವರದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ರಥಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಮತ್ತು ಅವರ ಪುತ್ರ ರಾಜಗೋಪಾಲ ಆಚಾರ್ಯ ಅವರ ನೇತೃತ್ವದಲ್ಲಿ ರಥ ನಿರ್ಮಾಣ ಕಾರ್ಯ ಆರಂಭಗೊಂಡಿದ್ದು, ಮುಂದಿನ ವರುಷ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಅದಾದರೆ ಈಗಿರುವ 400 ವರ್ಷಗಳಷ್ಟು ಪುರಾತನವಾದ ಬ್ರಹ್ಮರಥದಲ್ಲಿ ಇದು ಕೊನೆಯ ರಥೋತ್ಸವವಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next