Advertisement
ಮುರ್ಡೇಶ್ವರದ ಖ್ಯಾತ ಉದ್ಯಮಿ ದಿ| ಆರ್.ಎನ್. ಶೆಟ್ಟಿ ಅವರ ಪುತ್ರ ಉದ್ಯಮಿ ಸುನಿಲ್ ಶೆಟ್ಟಿ ಅವರು ಒಂದು ಕೋಟಿ ರೂ. ವೆಚ್ಚದಲ್ಲಿ ನೂತನ ರಥ ನಿರ್ಮಾಣದ ವೆಚ್ಚ ಭರಿಸಿರುತ್ತಾರೆ.
Related Articles
ದೇಗುಲದಲ್ಲಿ ಈ ವರೆಗೆ ಬಳಸುತ್ತಿದ್ದ ರಥವು ಕೆಳದಿ ಅರಸರ ಕಾಲದ್ದಾಗಿದ್ದು, 400 ವರ್ಷಗಳ ಇತಿಹಾಸವನ್ನು ಹೊಂದಿದೆ. ಆ ರಥದಲ್ಲಿದ್ದ ಶಿಲ್ಪಕಲೆಯಲ್ಲಿ ಯಾವುದೇ ಬದಲಾವಣೆಯಾಗದಂತೆ ನೂತನ ರಥದಲ್ಲಿ ಕೂಡ ರೂಪಿಸಿರುವುದು ರಥ ಶಿಲ್ಪಿಗಳ ಕೈಚಳಕವನ್ನು ಎತ್ತಿಹಿಡಿದಿದೆ.
Advertisement
ಹಳೆಯ ರಥ ಸಂರಕ್ಷಣೆ400 ವರ್ಷಗಳ ಇತಿಹಾಸ ಹೊಂದಿರುವ ಹಳೆ ರಥವನ್ನು ದೇಗುಲದ ಆನೆಬಾಗಿಲಿನ ಬಳಿ ಸೂಕ್ತ ಸ್ಥಳದಲ್ಲಿ ಸಂರಕ್ಷಣೆ ಮಾಡಿ ಪಾರದರ್ಶಕ ಫ್ರೇಮ್ ಬಳಸಿ ಭಕ್ತರ ವೀಕ್ಷಣೆಗೆ ಇಡಲಾಗುವುದು ಎಂದು ದೇಗುಲದ ಕಾರ್ಯನಿರ್ವಹಣಾ ಕಾರಿ ಮಹೇಶ ತಿಳಿಸಿದ್ದಾರೆ.